ಹಾಸನ: ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿಯಲ್ಲಿ ಅಭಿವೃದ್ಧಿಪಡಿಸಿದ ತಂತ್ರಜ್ಞಾನದಲ್ಲಿ ಆಲೂಗಡ್ಡೆ ಅಂಗಾಂಶ ಕೃಷಿಗೆ ಒತ್ತು ನೀಡಲಾಗುತ್ತಿದೆ ಎಂದು ಹಾಸನ ತಾಲೂಕು ಸೋಮನಹಳ್ಳಿ ಕಾವಲು ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ಮುಖ್ಯಸ್ಥರು ಡಾ.ಎಚ್. ಅಮರನಂಜುಂಡೇಶ್ವರ ಹೇಳಿದರು.
ಸೋಮನಹಳ್ಳಿ ಕಾವಲ್‌ತೋಟಗಾರಿಕೆ ಸಂಶೋಧನಾ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಆಲೂಗಡ್ಡೆ ಅಂಗಾಂಶ ಕೃಷಿ ಪಾತ್ರ್ಯಕ್ಷಿಕೆ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಭಾಷಣ ಮಾಡಿದ ಅವರು, ಆಲೂಗಡ್ಡೆಯ ಕಾಂಡ ಸಸಿಗಳಿಂದ ಆಲೂಗಡ್ಡೆ ಬೆಳೆಯುವ ಪದ್ಧತಿಯ ಬಗ್ಗೆ ಬೆಳೆಗಾರರು ಹೆಚ್ಚು ಆಸಕ್ತಿ ವಹಿಸಬೇಕು ಎಂದು ಸಲಹೆ ನೀಡಿದರು.
ಇದನ್ನೂ ಓದಿ:ಬೆಳಗಾವಿ ನಮ್ಮದೆಂದ ಮಹಾ ಸಿಎಂ ವಿರುದ್ಧ ಧರಣಿ
ಕಾರ್ಯಕ್ರಮದಲ್ಲಿ 100ಕ್ಕೂ ಹೆಚ್ಚು ಆಲೂಗಡ್ಡೆ ಬೆಳೆಗಾರರು ಮತ್ತು ನರ್ಸರಿ ಉತ್ಪಾದಕರು ಕ್ಷೇತ್ರೋತ್ಸವವನ್ನು ವೀಕ್ಷಿಸಿ ಹೊಸ ತಂತ್ರಜ್ಞಾನದ ಪ್ರಾತ್ಯಕ್ಷಿಕೆಯ ಮಾಹಿತಿ ಪಡೆದರು. ಈ ಕ್ಷೇತ್ರೋತ್ಸವದಲ್ಲಿ ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿ.ವಿ. ಸಂಶೋಧನಾ ನಿರ್ದೇಶಕ ಡಾ.ಡಿ.ಆರ್. ಪಾಟೀಲ್ ಅಧ್ಯಕ್ಷತೆ ವಹಿಸಿದ್ದರು. ವಿಸ್ತರಣಾ ನಿರ್ದೇಶಕ ಡಾ.ವೈ.ಕೆ.ಕೋಟಿಕಲ್, ಹಾಸನ ಕೃಷಿ ಕಾಲೇಜು ಡೀನ್ ಡಾ.ಎನ್.ದೇವಕುಮಾರ, ತೋಟಗಾರಿಕೆ ಉಪನಿರ್ದೇಶಕ ಎಚ್.ಆರ್.ಯೋಗೇಸ್, ಪ್ರಾಧ್ಯಾಪಕ ಡಾ.ಪಿ.ಎಂ. ಮುನಿ ಕೃಷ್ಣಪ್ಪ, ಕಂದಲಿ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ರಾಜೇಗೌಡ ಮತ್ತಿತರರು ಉಪಸ್ಥಿತರಿದ್ದರು