Advertisement
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ನಮ್ಮ ದೇಶದಲ್ಲಿ ಕೋಳಿಗಳಿಗೆ ಕೊರೊನಾ ವೈರಾಣು ಸೋಂಕು ಕಾಣಿಸಿಕೊಂಡ ಬಗ್ಗೆ ಇದುವರೆಗೆ ಯಾವುದೇ ವರದಿಗಳಿಲ್ಲ ಹಾಗೂ ಈ ವೈರಾಣು ಸೋಂಕು ಹರಡುವಿಕೆಯಲ್ಲಿ ಕೋಳಿಗಳ ಪಾತ್ರವೇನೂ ಇಲ್ಲ. ಸೋಂಕು ಪೀಡಿತ ಮನುಷ್ಯರ ಸಂಪರ್ಕದಿಂದ ಮಾತ್ರ ಈ ಸೋಂಕು ಇತರರಿಗೆ ಹರಡುತ್ತದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
Related Articles
Advertisement
ಸಚಿವರಿಂದ ರಕ್ತ ಪರೀಕ್ಷಾ ಕೇಂದ್ರ ಪರಿಶೀಲನೆಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆ ಆವರಣದ ಕೊರೊನಾ ಸೋಂಕು ಪರೀಕ್ಷಾ ಕೇಂದ್ರಕ್ಕೆ ಮಂಗಳವಾರ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ಸೋಂಕು ಪರೀಕ್ಷೆ ಸೌಲಭ್ಯವಿರದ ಕಾರಣ ಆರಂಭದ ದಿನಗಳಲ್ಲಿ ರಕ್ತದ ಮಾದರಿಯನ್ನು ಪುಣೆಯ ಎನ್‌ಐವಿ ಕೇಂದ್ರಕ್ಕೆ ಪರೀಕ್ಷೆಗೆಂದು ಕಳುಹಿಸಲಾಗುತ್ತಿತ್ತು. ಇತ್ತೀಚೆಗೆ ಬೆಂಗಳೂರಿನಲ್ಲಿ ವಿಕ್ಟೋರಿಯಾ ಆಸ್ಪತ್ರೆ ಹಾಗೂ ರಾಜೀವ್‌ಗಾಂಧಿ ಆಸ್ಪತ್ರೆ ಬಳಿಯ ಎನ್‌ಐವಿ ಕೇಂದ್ರ ಬಳಿ ಕೊರೊನಾ ಸೋಂಕು ರಕ್ತದ ಮಾದರಿ ಪರೀಕ್ಷಾ ಕೇಂದ್ರ ತೆರೆಯಲಾಗಿದೆ. ಒಂದು ದಿನದಲ್ಲಿ 88 ಜನರ ರಕ್ತ ಮಾದರಿ ಪರೀಕ್ಷೆಯನ್ನು ಇಲ್ಲಿ ಮಾಡಬಹುದಾಗಿದೆ. ಯಾರಿಗಾದರೂ ಸೋಂಕಿನ ಲಕ್ಷಣಗಳಾಗಲಿ ಅಥವಾ ಅನುಮಾನವಿದ್ದಲ್ಲಿ ಇಲ್ಲಿ ಬಂದು ರಕ್ತ ಮಾದರಿ ಪರೀಕ್ಷೆ ಮಾಡಿಸಿಕೊಳ್ಳಬಹುದು. ಇದುವರೆಗೆ 35 ರಕ್ತ ಮಾದರಿ ಪರೀಕ್ಷೆ ನಡೆಸಲಾಗಿದ್ದು ಎಲ್ಲವೂ ನೆಗೆಟಿವ್ ಬಂದಿದೆ. ಹೀಗಾಗಿ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.