220/66/11 ಕೆವಿ ವಿದ್ಯುತ್ ಸ್ವೀಕರಣಾ ಹಾಗೂ ಉಪಕೇಂದ್ರಗಳ ಶಂಕುಸ್ಥಾಪನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಕೃಷಿ ಪಂಪ್‌ಸೆಟ್‌ಗಳಿಗೆ ಈಗ ಹಗಲು ಮತ್ತು ರಾತ್ರಿ ವಿದ್ಯುತ್ ನೀಡಲಾಗುತ್ತಿದೆ. ರಾತ್ರಿ ತ್ರಿಫೇಸ್ ವಿದ್ಯುತ್ ನೀಡುವುದರಿಂದ ಗುಡ್ಡಗಾಡು ಪ್ರದೇಶ, ಮಲೆನಾಡಿನಲ್ಲಿ ಕಾಡುಪ್ರಾಣಿಗಳ ಭಯ ಇರುತ್ತದೆ. ಆದ್ದರಿಂದ ರಾತ್ರಿ ಬದಲು ಹಗಲಲ್ಲೇ ನಿರಂತರವಾಗಿ 6 ಗಂಟೆ ವಿದ್ಯುತ್ ನೀಡಬೇಕೆಂದು ಬೇಡಿಕೆ ಇದೆ ಎಂದರು. ಪ್ರತಿ ತಾಲೂಕಿನಲ್ಲಿ 60 ಮೆಗಾವ್ಯಾಟ್ ಸೌರ ವಿದ್ಯುತ್ ಉತ್ಪಾದನೆಗೆ ಕ್ರಮ ಕೈಗೊಳ್ಳಲಾಗಿದ್ದು, ಇದು ಸಾಕಾರವಾದಲ್ಲಿ ಹಗಲು ವೇಳೆ ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಪೂರೈಕೆ ಮಾಡಬಹುದು ಎಂದು ತಿಳಿಸಿದರು.
Advertisement
ರಾಜ್ಯದಲ್ಲಿ ಒಟ್ಟು 25 ಲಕ್ಷ ಕೃಷಿ ಪಂಪ್‌ಸೆಟ್‌ಗಳಿದ್ದು ಇದರಲ್ಲಿ 5 ಲಕ್ಷ ಕೃಷಿ ಪಂಪ್‌ಸೆಟ್‌ಗಳಿಗೆ ಅಕ್ರಮ ಸಕ್ರಮ ಯೋಜನೆ ಅಡಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗುತ್ತಿದೆ ಎಂದು ಹೇಳಿದರು.