Advertisement
ಶುಕ್ರವಾರ ತಮ್ಮ ಕಚೇರಿಯಲ್ಲಿ ಮಾಧ್ಯಮದವರಿಗೆ ಈ ಬಗ್ಗೆ ಮಾಹಿತಿ ನೀಡಿದ ಅವರು ಎರಡು ತಿಂಗಳ ಬಿಲ್‌ಗಳನ್ನು ಒಟ್ಟಿಗೆ ನೀಡಿದ್ದರೂ, ನಿಗದಿತ ಸರಾಸರಿ ದರಕ್ಕಿಂತ ಹೆಚ್ಚು ಮೊತ್ತದ ಬಿಲ್ ನೀಡಿರುವ ಬಗ್ಗೆ ಸಾರ್ವಜನಿಕರ ಅಸಮಾಧಾನ ತನ್ನ ಗಮನಕ್ಕೆ ಬಂದಿದೆ. ಈ ಬಗ್ಗೆ ಮೆಸ್ಕಾಂ ಅಧಿಕಾರಿಗಳ ಜತೆ ಸಭೆ ನಡೆಸಲಾಗಿದೆ. ಶನಿವಾರ ಮತ್ತೂಮ್ಮೆ ಸಭೆ ನಡೆಸಿ, ಗ್ರಾಹಕರಿಗೆ ಅನ್ಯಾಯವಾಗದಂತೆ ಗಮನ ಹರಿಸಲು ನಿರ್ದೇಶಿಸಲಾಗುವುದು ಎಂದು ವಿವರಿಸಿದರು.
ಮೀನುಗಾರಿಕೆ ಅವಧಿಯನ್ನು ಕೇಂದ್ರ ಸರಕಾರ ಜೂ.15ರ ವರೆಗೆ ವಿಸ್ತರಿಸಿ ಆದೇಶಿಸಿದೆ. ರಾಜ್ಯ ಸರಕಾರವೂ ಇದರನ್ವಯ ಕ್ರಮ ಕೈಗೊಂಡಿದೆ. ಈ ನಿಟ್ಟಿನಲ್ಲಿ ವಿಮಾ ಕಂಪೆನಿ ಸಹಿತ ಸಂಬಂಧಪಟ್ಟವರಿಗೆ ಸೂಕ್ತ ಸೂಚನೆ ನೀಡಲಾಗುವುದು ಎಂದು ಸಚಿವರು ತಿಳಿಸಿದರು. ರಾಜ್ಯದಲ್ಲಿ ಒಳನಾಡು ಮೀನುಗಾರಿಕೆ ಅಭಿವೃದ್ಧಿ ನಿಟ್ಟಿನಲ್ಲಿ ಮುಂದಿನ 10 ವರ್ಷಗಳಲ್ಲಿ ಮೀನು ಮರಿ ಉತ್ಪಾದನೆ ಸೇರಿದಂತೆ ಈ ಕ್ಷೇತ್ರದಲ್ಲಿ ಹೆಚ್ಚಿನ ಪ್ರಗತಿಗೆ ಕಾರ್ಯಯೋಜನೆ ರೂಪಿಸಲಾಗುವುದು ಎಂದರು.
Related Articles
Advertisement