Advertisement

Congress ಕಾರ್ಯಕರ್ತರಿಗೆ ಅಧಿಕಾರ ಭಾಗ್ಯ: 44 ನಿಗಮ,ಮಂಡಳಿಗೆ ನೇಮಕ ಮಾಡಿದ ಸಿಎಂ

12:29 AM Mar 01, 2024 | Team Udayavani |

ಬೆಂಗಳೂರು: ಕರ್ನಾಟಕ ಕ್ರೀಡಾ ಪ್ರಾಧಿಕಾರ ಮತ್ತು ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ ಉಪಾಧ್ಯಕ್ಷ ಸಹಿತ ರಾಜ್ಯದ 44 ವಿವಿಧ ನಿಗಮ, ಮಂಡಳಿ, ಪ್ರಾಧಿಕಾರ, ಆಯೋಗಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅನು ಮೋದಿಸಿದ್ದ ಪಟ್ಟಿಗೆ ಅಧಿಕೃತ ಮುದ್ರೆ ಬಿದ್ದಿದೆ.

Advertisement

ಮೊದಲ ಪಟ್ಟಿಯಲ್ಲಿ 34 ಶಾಸಕರಿಗೆ ವಿವಿಧ ನಿಗಮ-ಮಂಡಳಿಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಗಳನ್ನು ನೀಡಲಾಗಿತ್ತು. ಆದರೆ ಈ ಪೈಕಿ ಹಂಪನಪಗೌಡ ಬಾದರ್ಲಿ, ಬಸವನಗೌಡ ದದ್ದಲ್‌ ಮತ್ತಿತರ ಕೆಲ ವರು ಎರಡು ವರ್ಷಗಳ ಅಧಿಕಾರಾವಧಿ ಬೇಡ ಎನ್ನುವ ಮೂಲಕ ಸಚಿವ ಸ್ಥಾನಕ್ಕೆ ಪಟ್ಟು ಹಿಡಿಯುವ ಮುನ್ಸೂಚನೆ ನೀಡಿದ್ದಾರೆ. ಅಲ್ಲದೆ ಕ್ರೀಡಾ ಪ್ರಾಧಿ ಕಾರ, ಮಾಲಿನ್ಯ ನಿಯಂತ್ರಣ ಮಂಡಳಿಗಳ ನೇಮ ಕಾತಿಯಲ್ಲೂ ಎಡವಟ್ಟಾಗಿದ್ದು, ಕೆಲವು ಶಾಸಕರಿಗೆ ಸ್ಥಾನ ಕೊಟ್ಟು ಕಿತ್ತುಕೊಂಡಂತಾಗಿದೆ. ಇನ್ನು ಕೆಲವರಿಗೆ ಪರ್ಯಾಯ ವ್ಯವಸ್ಥೆಯನ್ನೂ ಸರಕಾರ ಕಲ್ಪಿಸಿದೆ.
ನಿಗಮ, ಮಂಡಳಿ, ಪ್ರಾಧಿಕಾರ, ವಿವಿಧ ಸಮಿತಿ ಗಳು ಸೇರಿ ಸುಮಾರು 5 ಸಾವಿರಕ್ಕೂ ಹೆಚ್ಚು ಮಂದಿ ಕಾಂಗ್ರೆಸ್‌ ಕಾರ್ಯಕರ್ತರಿಗೆ ಸ್ಥಾನಮಾನ ನೀಡುವುದಾಗಿ ಡಿಸಿಎಂ ಡಿ.ಕೆ. ಶಿವಕುಮಾರ್‌ ಭರವಸೆ ಕೊಟ್ಟಿದ್ದರು. ಅದರಂತೆ ಒಂದೊಂದೇ ನಿಗಮ-ಮಂಡಳಿಗಳಿಗೆ ನೇಮಕಾತಿಯನ್ನೂ ಮಾಡುವ ಪ್ರಕ್ರಿಯೆ ಚಾಲನೆ ನೀಡಲಾಗಿದೆ.

ಈಗ ಪಕ್ಷದ 44 ಮಂದಿ ಕಾರ್ಯಕರ್ತರಿಗೆ ಸ್ಥಾನ
ಮಾನಗಳನ್ನು ನೀಡಲಾಗಿದೆ. ಈ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ಬೆಂಬಲಿಗರಿಗೆ ಸಮಾನ ಹಂಚಿಕೆ ಮಾಡುವ ಪ್ರಯತ್ನ ನಡೆದಿದೆ. ಅಳೆದು-ತೂಗಿ ನೇಮಕ ಮಾಡಿದ್ದು, ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪಕ್ಷದ ಪರವಾಗಿ ಹುಮ್ಮಸ್ಸಿನಿಂದ ಕೆಲಸ ಮಾಡಲು ಸಹಾಯ ಆಗಲಿದೆ ಎಂಬ ಆಶಯ ಕಾಂಗ್ರೆಸ್‌ ವಲಯದಲ್ಲಿದೆ. ಕರಾವಳಿಯಿಂದ ಗೇರು ಅಭಿವೃದ್ಧಿ ನಿಗಮಕ್ಕೆ ಮಮತಾ ಗಟ್ಟಿ, ಮಂಗಳೂರು ನ. ಪ್ರಾಧಿಕಾರಕ್ಕೆ ಸದಾಶಿವ ಉಳ್ಳಾಲ್‌ ನೇಮಕಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next