Advertisement

Siddaramaiah ಕಳಪೆ ಕಲ್ಲಿದ್ದಲಿನಿಂದ ವಿದ್ಯುತ್‌ ಉತ್ಪಾದನೆ ಕುಸಿತ

12:32 AM Sep 23, 2023 | Team Udayavani |

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್‌ ಉತ್ಪಾದನೆ ಕುಸಿತಕ್ಕೆ ಕಳಪೆ ಕಲ್ಲಿದ್ದಲು ಪೂರೈಕೆಯೇ ಕಾರಣ ಎಂದು ಇಂಧನ ಇಲಾಖೆಯು ಕೇಂದ್ರ ಸರಕಾರದ ಕಡೆಗೆ ಬೊಟ್ಟು ಮಾಡಿದ್ದು, ಈ ಬಗ್ಗೆ ಗಮನವನ್ನೂ ಸೆಳೆದಿರುವುದಾಗಿ ತಿಳಿಸಿದೆ.

Advertisement

ಗೃಹ ಕಚೇರಿ “ಕೃಷ್ಣಾ’ದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಇಂಧನ ಇಲಾಖೆ ಪ್ರಗತಿ ಪರಿಶೀಲನ ಸಭೆಯಲ್ಲಿ ಅಧಿಕಾರಿಗಳು ರಾಜ್ಯದಲ್ಲಿ ವಿದ್ಯುತ್‌ ಉತ್ಪಾದನೆ ಪ್ರಮಾಣದಲ್ಲಾಗಿರುವ ಕುಸಿತಕ್ಕೆ ಈ ಸಮಜಾಯಿಷಿ ನೀಡಿದ್ದಾರೆ.

ಮಳೆ ಕೈಕೊಟ್ಟಿರುವುದು ಕೂಡ ಉತ್ಪಾದನೆ ಮೇಲೆ ಪರಿಣಾಮ ಬೀರಿದೆ. ಹೆಚ್ಚುವರಿ ಕಲ್ಲಿದ್ದಲಿನ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ. ಇದರ ಭಾಗವಾಗಿ ಪ್ರತಿದಿನ ಎರಡು ರೇಕು ಗಳಷ್ಟು ಹೆಚ್ಚುವರಿ ಕಲ್ಲಿದ್ದಲು ಹಂಚಿಕೆಗೆ ಕೇಂದ್ರ ಸರಕಾರಕ್ಕೆ ಮನವಿ ಮಾಡಲಾಗಿದೆ. ಕಲ್ಲಿದ್ದಲು ಆಮದಿಗೂ ಟೆಂಡರ್‌ ಕರೆಯಲಾಗಿದೆ ಎಂದು ವಿವರಿಸಿದರು.

ತೇವವಾದ ಕಲ್ಲಿದ್ದಲು ಬಳಸಬೇಡಿ
ರಾಜ್ಯದ ಸ್ಥಾಪಿತ ಸಾಮರ್ಥ್ಯಕ್ಕೆ ಅನುಸಾರವಾಗಿ ವಿದ್ಯುತ್‌ ಉತ್ಪಾದನೆ ಮಾಡಲು ಅಗತ್ಯ ಕ್ರಮ ಕೈಗೊಳ್ಳ ಬೇಕು. ತೇವಗೊಂಡ ಕಲ್ಲಿದ್ದಲು ಬಳಕೆ ಮಾಡಬಾರದು ಎಂದು ಮುಖ್ಯಮಂತ್ರಿ ಸೂಚಿಸಿದರು. ನೀರಾವರಿಗೆ ಸೌರ ವಿದ್ಯುತ್‌ ಪಂಪ್‌ಸೆಟ್‌ಗಳ ಬಳಕೆ ಉತ್ತೇಜಿಸುವ ಆವಶ್ಯಕತೆ ಇದೆ. ಇದರಿಂದ ಅಕ್ರಮ ನೀರಾವರಿ ಪಂಪ್‌ಸೆಟ್‌ ಹಾವಳಿ ಹಾಗೂ ವಿದ್ಯುತ್‌ ಪ್ರಸರಣ ಸೋರಿಕೆ ತಡೆಗಟ್ಟಲು ಸಾಧ್ಯವಿದೆ ಎಂಬ ಬಗ್ಗೆ ಅಧಿಕಾರಿಗಳು ಮುಖ್ಯಮಂತ್ರಿಯವರ ಗಮನಸೆಳೆದರು.

ಗೃಹಜ್ಯೋತಿಯಡಿ ಆಗಸ್ಟ್ ನಲ್ಲಿ 1.26 ಕೋಟಿ, ಸೆಪ್ಟಂಬರ್‌ನಲ್ಲಿ 1.35 ಕೋಟಿ ಗ್ರಾಹಕರಿಗೆ ಶೂನ್ಯ ವಿದ್ಯುತ್‌ ಬಿಲ್‌ ನೀಡ ಲಾ ಗಿದೆ. ಇದಕ್ಕೆ 1,400 ಕೋಟಿ ರೂ. ಒದಗಿಸ ಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next