Advertisement

ವಿದ್ಯುತ್‌ ಅಕ್ರಮ; ಶೋಭಾಗೆ ಭಯವೇಕೆ?

08:55 AM Nov 01, 2017 | |

ಬೆಂಗಳೂರು: ಇಂಧನ ಇಲಾಖೆಯಲ್ಲಿ ವಿದ್ಯುತ್‌ ಖರೀದಿಯಲ್ಲಿ ನಡೆದಿರುವ ಅಕ್ರಮದ ಕುರಿತು ಸದನ ಸಮಿತಿ ತನಿಖೆ ನಡೆಸಿರುವ ವರದಿ ತಮ್ಮ ಕೈಗೆ ಬಂದಿಲ್ಲ. ಈಗಲೇ ಸಂಸದೆ ಶೋಭಾ ಕರಂದ್ಲಾಜೆ ಯಾಕೆ ಚಡಪಡಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿ, ಶೋಭಾ ಕರಂದ್ಲಾಜೆ ತಪ್ಪು ಮಾಡಿಲ್ಲ ಎಂದರೆ ಭಯ ಪಡುವುದೇಕೆ. ಇವರು ಏನೂ ಮಾಡಿಲ್ಲ ಎಂದಾದರೆ ವರದಿ ಬರಲಿ ಬಿಡಿ ನೋಡೋಣ ಎನ್ನಬೇಕಿತ್ತು. ಸುಮ್ಮನೆ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ. ವರದಿ ಬರುವ ಮುಂಚೆಯೇ ಅವರು ಭಯ ಪಟ್ರೆ ತಪ್ಪು ಮಾಡಿದ್ದಾರೆ ಎಂದು ಅರ್ಥ ಆಗುತ್ತದೆ ಅಲ್ವಾ ಎಂದು ಪ್ರಶ್ನಿಸಿದರು. ಖಾಸಗಿ ಆಸ್ಪತ್ರೆಗಳ ನಿಯಂತ್ರಣ ವಿಧೇಯಕ ಜಾರಿಗೊಳಿಸದಂತೆ ವೈದ್ಯರು ಪ್ರತಿಭಟನೆಗೆ ಮುಂದಾಗಿರುವುದಕ್ಕೆ ಪ್ರತಿಕ್ರಿಯಿಸಿರುವ ಅವರು,
ಸದನ ಸಮಿತಿ ವರದಿ ನೀಡಿದೆ. ಬೆಳಗಾವಿ ಅಧಿವೇಶನದಲ್ಲಿ ವಿಧೇಯಕದ ಬಗ್ಗೆ ಚರ್ಚೆಯಾಗಲಿದೆ. ವೈದ್ಯರ ಜತೆಗೆ ಸಾಕಷ್ಟು ಬಾರಿ ಚರ್ಚಿಸಲಾಗಿದೆ. ಸಭೆ ಮಾಡುವ ಬಗ್ಗೆ ಮುಂದೆ ನೋಡೋಣ ಎಂದು ಹೇಳಿದರು. 

ಪ್ರಧಾನಿ ಮೋದಿ ಬಗ್ಗೆ ಸಿಎಂ ಮಾತನಾಡೋದು ಜೋಕ್‌ ಆಫ್ ದಿ ಇಯರ್‌ ಎಂದಿರುವ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರಿಗೆ ತಿರುಗೇಟು ನೀಡಿರುವ ಮುಖ್ಯಮಂತ್ರಿ, ಯಡಿಯೂರಪ್ಪನವರ ಬಗ್ಗೆ ಮಾತನಾಡುವುದು ವ್ಯರ್ಥ ಎಂದರು. ಉಪೇಂದ್ರರ ಹೊಸ ಪಕ್ಷದ ಬಗ್ಗೆ ಪ್ರತಿಕ್ರಿಸಿದ ಅವರು, ಪ್ರಜಾಪ್ರಭುತ್ವದಲ್ಲಿ ಪಕ್ಷ ಸ್ಥಾಪನೆ ಮಾಡುವ ಸ್ವಾತಂತ್ರ್ಯ ಎಲ್ಲರಿಗೂ ಇದೆ. ಹೊಸ ಪಕ್ಷ ಘೋಷಣೆ ಮಾಡಿದಾಗ ಎಲ್ಲರೂ ಹೇಳಿದ್ದನ್ನೇ ಉಪೇಂದ್ರ ಕೂಡ ಹೇಳಿದ್ದಾರೆ ಎಂದರು.

ಶೋಭಾ ಪಟ್ಟು
ಬೆಂಗಳೂರು: “ವಿದ್ಯುತ್‌ ಖರೀದಿ ಪ್ರಕರಣದಲ್ಲಿ ತಮ್ಮನ್ನು ಸಿಲುಕಿಸುವ ಪ್ರಯತ್ನವನ್ನು ರಾಜ್ಯ ಸರ್ಕಾರ ಮಾಡುತ್ತಿದೆ
ಎಂದು ಆರೋಪಿಸಿರುವ ಸಂಸದೆ ಶೋಭಾ ಕರಂದ್ಲಾಜೆ, ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ತಮ್ಮನ್ನು ಮಂಪರು ಪರೀಕ್ಷೆಗೆ ಒಳಪಡಿಸಿ ಸತ್ಯಾಸತ್ಯತೆಯನ್ನು ತಿಳಿದುಕೊಳ್ಳಬೇಕು ಎಂದು ಸುದ್ದಿಗೋಷಿಯಲ್ಲಿ ಮತ್ತೂಮ್ಮೆ ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next