Advertisement
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎಂಬ ಹತಾಶೆಯಿಂದ ಮಾನಸಿಕ ಸ್ಥಿಮಿತ ಕಳೆದುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅವರ ಕೈಯಲ್ಲೇ ಇನ್ನೂ ಅಧಿಕಾರವಿದೆ, ತಾಕತ್ತಿದ್ದರೆ ನಮ್ಮನ್ನೆಲ್ಲ ಅರೆಸ್ಟ್ ಮಾಡಿಸಲಿ ಎಂದರು.
ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆಯಾಗಿಲ್ಲ.ಮುಂಬರುವ ಚುನಾವಣೆಗೂ ಸಿದ್ದರಾಮಯ್ಯ ಅವರನ್ನೇ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿದರೆ ಪಕ್ಷದೊಳಗಿನ ಬಂಡಾಯದ ಬಿಸಿ ಹೈಕಮಾಂಡ್‌ಗೆ ತಟ್ಟಲಿದೆ. ಹೀಗಾಗಿ ಅವರು ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಮಾಡಲು ಹೆದರುತ್ತಿದ್ದಾರೆ ಎಂದು ಹೇಳಿದರು. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಡಿರುವ
ಆರೋಪಗಳಲ್ಲಿ ಸತ್ಯಾಂಶವಿದ್ದರೆ ಬಿಜೆಪಿ ಕೂಡ ರಾಜ್ಯಾದ್ಯಂತ ಹೋರಾಟ ನಡೆಸಲಿದೆ ಎಂದು ತಿಳಿಸಿದರು.