Advertisement
ಇಂಧನ ಇಲಾಖೆಗೆ ಸಂಬಂಧಿಸಿದ ಸಭೆಯಲ್ಲಿ ಮಾತನಾಡಿ, ಜನವರಿ ಮತ್ತು ಫೆಬ್ರವರಿಯಲ್ಲಿ ತಲಾ 400 ಮೆಗಾವ್ಯಾಟ್ ಹಾಗೂ ಮಾರ್ಚ್, ಎಪ್ರಿಲ್, ಮೇ ತಿಂಗಳಲ್ಲಿ ತಲಾ 1 ಸಾವಿರ ಮೆ.ವ್ಯಾ. ವಿದ್ಯುತ್ ಖರೀದಿಗೆ ಯೋಜನೆ ರೂಪಿಸಲಾಗಿದೆ. ದೀರ್ಘಾವಧಿ ವಿದ್ಯುತ್ ಖರೀದಿ ಮಾಡಿದರೆ ಕಡಿಮೆ ದರಕ್ಕೆ ವಿದ್ಯುತ್ ಲಭ್ಯವಾಗುತ್ತದೆ ಎಂದರು.
ಪ್ರಸ್ತುತ ಶರಾವತಿ ನದಿಯಲ್ಲಿ ಸಾವಿರ ಮೆ.ವ್ಯಾ. ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ. ಇದರಿಂದ ಹೆಚ್ಚುವರಿ ಸಾವಿರ ಮೆ.ವ್ಯಾ. ವಿದ್ಯುತ್ ಉತ್ಪಾದನೆ ಸಾಧ್ಯವಾಗಲಿದೆ. ಯೋಜನೆಗೆ 9 ಸಾವಿರ ಕೋಟಿ ರೂ. ವೆಚ್ಚವಾಗಲಿದೆ. ಟೆಂಡರ್ ಕರೆದು ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಮಂತ್ರಿಗಳಿಗೆ ಊಟ ಕೊಟ್ಟರೆ ತಪ್ಪೇನು?: ಸಚಿವ
ಡಿನ್ನರ್ ಪಾರ್ಟಿ ಮಾಡುವುದು ತಪ್ಪಿಲ್ಲ ಎಂದು ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಚಿವ ಸತೀಶ್ ಜಾರಕಿಹೊಳಿ ಮನೆಯಲ್ಲಿ ಡಿನ್ನರ್ ಪಾರ್ಟಿ ಮಾಡಿದ್ದನ್ನು ಸಮರ್ಥಿಸಿಕೊಂಡರು. ಡಿನ್ನರ್ ಪಾರ್ಟಿ ಮಾಡುವುದು ತಪ್ಪಿಲ್ಲ ಎಂದು ಸಿಎಂ ಹೇಳಿದ್ದಾರೆ.
Related Articles
Advertisement