Advertisement

Power Sharing: ಪಕ್ಷದಲ್ಲಿ ಒಪ್ಪಂದವಾಗಿದೆ ಎಂದಾದ್ರೆ ನಾವೆಲ್ಲ ಯಾಕಿರಬೇಕು?: ಪರಮೇಶ್ವರ್‌

05:10 PM Dec 05, 2024 | Team Udayavani |

ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆಗೆ ಸಂಬಂಧಿಸಿ ಪಕ್ಷದಲ್ಲಿ ಒಪ್ಪಂದವಾಗಿದೆ ಎಂದಾದರೆ ನಾವೆಲ್ಲರೂ ಯಾಕೆ ಇರಬೇಕು? ಅವರಿಬ್ಬರೇ ರಾಜಕಾರಣ ಮಾಡಿ, ಅವರಿಬ್ಬರೇ ನಡೆಸಿ ಬಿಡಲಿ. ಬೇರೆಯವರು ಇರುವುದೇ ಬೇಡವಾ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಬಹಿರಂಗವಾಗಿಯೇ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Advertisement

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ರಾಷ್ಟ್ರೀಯ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮುಖ್ಯಮಂತ್ರಿ ಬದಲಾವಣೆಗೆ ಸಂಬಂಧಿಸಿ ಪಕ್ಷದಲ್ಲಿ ಒಪ್ಪಂದವಾಗಿದ್ದು ನಿಜ ಎಂಬ ಹೇಳಿಕೆಯು ರಾಜ್ಯ ಕಾಂಗ್ರೆಸ್‌ನಲ್ಲಿ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಗೃಹ ಸಚಿವ ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ಯಾವ ಒಪ್ಪಂದ ಆಗಿದೆಯೋ ನಮಗೆ ಗೊತ್ತಿಲ್ಲ. ​ನಾನು 2-3 ಜನರನ್ನು ದೆಹಲಿಯಲ್ಲಿ ಕೇಳಿದೆ, ಇಲ್ಲೂ ಕೇಳಿದೆ. ಒಪ್ಪಂದ ಆಗಿದೆ ಎಂದು ಯಾರೂ ಹೇಳಿಲ್ಲ. ಡಿ.ಕೆ. ಶಿವಕುಮಾರ್ ಯಾವ ಅರ್ಥದಲ್ಲಿ ‌ಹೇಳಿದ್ದಾರೋ ಗೊತ್ತಿಲ್ಲ. ಯಾವುದೇ ಒಪ್ಪಂದ ಆಗಿಲ್ಲ ಎಂದು ಸಿಎಂ ಸ್ಪಷ್ಟವಾಗಿ ಹೇಳಿದ್ದಾರೆ. ಆ ರೀತಿ ಆಗಲು ಸಾಧ್ಯವಿಲ್ಲ, ಹೈಕಮಾಂಡ್ ಬಿಟ್ಟು ಹೋಗಲ್ಲ. ಹೈಕಮಾಂಡ್ ತೀರ್ಮಾನ ಒಪ್ಪಿಕೊಳ್ಳುತ್ತೇವೆ ಎಂದು ಪರಮೇಶ್ವರ್ ಹೇಳಿದರು.

ಡಿಕೆಶಿ ಹೇಳಿಕೆಗೆ ಬುಧವಾರ ಪ್ರತಿಕ್ರಿಯಿಸಿದ್ದ ಸಿಎಂ ಸಿದ್ದರಾಮಯ್ಯ, ನಮ್ಮ ನಡುವೆ ಯಾವ ಒಪ್ಪಂದವೂ ಆಗಿಲ್ಲ. ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳುತ್ತೇವೆ ಎಂದು ಹೇಳಿದ್ದರು. ಇದೀಗ ಅಧಿಕಾರ ಹಂಚಿಕೆ ಒಪ್ಪಂದ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ್ದು, ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿಪಕ್ಷಗಳಿಗೆ ಉತ್ತರ ಕೊಡಲು ಹಾಸನ ಸಮಾವೇಶ: ಪರಮೇಶ್ವರ್
ಹಾಸನದಲ್ಲಿ ಕಾಂಗ್ರೆಸ್ ಜನ ಕಲ್ಯಾಣ ಸಮಾವೇಶ ವಿಚಾರವಾಗಿ ಮಾತನಾಡಿ, ಜನರು ಸ್ವಾಭಿಮಾನಿ ಒಕ್ಕೂಟಗಳ ಮಾಡಿಕೊಂಡಿದ್ದಾರೆ. ಅವರು ನಮ್ಮ ಪಕ್ಷಕ್ಕೆ, ಸರ್ಕಾರದ ಬಗ್ಗೆ ಸಹಾನೂಭೂತಿವುಳ್ಳವರೊಂದಿಗೆ ಪಕ್ಷವೂ ಸೇರಿ ಎಲ್ಲರೂ ಒಟ್ಟಾಗಿ ಸಮಾವೇಶ ಮಾಡುತ್ತಿದ್ದೇವೆ.  ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಕೀಯ ವಿಚಾರ ಪ್ರಸ್ತಾಪ ಮಾಡಲು ಆಗಲ್ಲ. ಜನರಿಗೆ ಸತ್ಯಾಂಶ ತಿಳಿಸಬೇಕು. ವಿಪಕ್ಷಕ್ಕೆ ರಾಜಕೀಯವಾಗಿ ಉತ್ತರ ಕೊಡಬೇಕು. ರಾಜಕೀಯವಾಗಿ ಉತ್ತರ ಕೊಡಲು ಸಮಾವೇಶ ಮಾಡುತ್ತಿದ್ದೇವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next