ವಿಧಾನಪರಿಷತ್ತು: ಬೇಡಿಕೆಗೆ ತಕ್ಕಂತೆ ವಿದ್ಯುತ್ ಪೂರೈಸಲು ರಾಜ್ಯ ಸರ್ಕಾರ ಬದಟಛಿವಾಗಿದೆ. ರೈತರು, ಗೃಹಬಳಕೆದಾರರು ಮತ್ತು ವಾಣಿಜ್ಯ ವಿದ್ಯುತ್ ಬಳಕೆದಾರರು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ.
ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‌ನ ಐವಾನ್ ಡಿಸೋಜಾ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಸರಾಸರಿ ವಿದ್ಯುತ್ ಬೇಡಿಕೆ ಪ್ರಮಾಣ 10 ಸಾವಿರ ಮೆ.ವ್ಯಾ. ಇದೆ. 2018ರ ಜನವರಿಯಲ್ಲಿ 10,347 ಮೆ.ವ್ಯಾ ವಿದ್ಯುತ್ ಪೂರೈಸಲಾಗಿದೆ. ಈ ಬಾರಿ ಜಲಾಯಶಗಳು ಪೂರ್ಣ ಭರ್ತಿ
ಆಗುತ್ತವೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಶೇ.60ರಷ್ಟು ಮಾತ್ರ ಭರ್ತಿ ಆಗಿವೆ. ಆದರೂ, ವಿದ್ಯುತ್ ಅಭಾವ ಉಂಟಾಗದಂತೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದರು.
ಪ್ರಸ್ತುತ ರಾಜ್ಯದಲ್ಲಿ ಜಲ ವಿದ್ಯುತ್ ಉತ್ಪಾದನಾ ಮೂಲಗಳು 3,788 ಮೆ.ವ್ಯಾ. ಹಾಗೂ ಶಾಖೋತ್ಪನ್ನ ವಿದ್ಯುತ್ ಉತ್ಪಾದನಾ ಘಟಕಗಳು 5,020 ಮೆ.ವ್ಯಾ. ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಹೊಂದಿವೆ. ಈ ಸಾಮರ್ಥ್ಯ ಹೆಚ್ಚಿಸಲು 370 ಮೆ.ವ್ಯಾ ಸಾಮರ್ಥ್ಯದ ಯಲಹಂಕ ಅನಿಲ ಆಧರಿತ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಈ ವರ್ಷ ಮೇ ನಲ್ಲಿ ಚಾಲನೆಗೊಳ್ಳಲಿದೆ ಎಂದರು.