ರಾಯಚೂರು: ಜಿಲ್ಲಾ ಡಿಸಿಬಿಐ ಪೊಲೀಸ್ ಅಧಿಕಾರಿ ಸಂಜೀವಕುಮಾರ ಜಿಲ್ಲಾದ್ಯಂತ ಅಕ್ರಮ ಮರಳು ಗಣಿಗಾರಿಕೆ ದಂಧೆಯಲ್ಲಿ ಶಾಮೀಲಾಗಿದ್ದು, ಅವರನ್ನು ಕೂಡಲೇ ಅಮಾನತು ಮಾಡಿ ತನಿಖೆ ನಡೆಸುವಂತೆ ದೇವದುರ್ಗ ಶಾಸಕ ಕೆ.ಶಿವನಗೌಡ ನಾಯಕ ಅವರು ಗೃಹ ಸಚಿವ ಎಂ.ಬಿ.ಪಾಟೀಲ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. ಜಿಲ್ಲೆಯಲ್ಲಿ ಮರಳು ದಂಧೆ ಅವ್ಯಾಹತವಾಗಿ ನಡೆಯುತ್ತಿದ್ದು, ಇದಕ್ಕೆ ಇಲಾಖೆ ಅಧಿಕಾರಿಗಳೇ ಪರೋಕ್ಷವಾಗಿ ಬೆಂಬಲ ನೀಡುತ್ತಿದ್ದಾರೆ. ಅಕ್ರಮ ಮರಳು ದಂಧೆಕೋರರ ಜತೆ ಹೊಂದಾಣಿಕೆ ಮಾಡಿಕೊಂಡಿರುವ ಪೊಲೀಸ್ ಅಧಿಕಾರಿ ಸಂಜೀವಕುಮಾರ ತಿಂಗಳಿಗೆ ಲಕ್ಷಾಂತರ ರೂ. ಹಣವನ್ನು ಹಫ್ತಾ ರೂಪದಲ್ಲಿ ವಸೂಲಿ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.
Advertisement
ಮರಳು ದಂಧೆಗೆ ಖಾಕಿ ಸಾಥ್: ಗೃಹ ಸಚಿವರಿಗೆ ಪತ್ರ
12:19 AM May 22, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.