Advertisement
ಗೃಹ ಕಚೇರಿ “ಕೃಷ್ಣಾ’ದಲ್ಲಿ ಶನಿವಾರ ಮೂಲ ಸೌಕರ್ಯ ಅಭಿವೃದ್ಧಿ ಇಲಾಖೆ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಅವರು, ಕೋವಿಡ್-19 ನಿಯಂತ್ರಣಕ್ಕಾಗಿ ಕೃಷಿ, ಶಿಕ್ಷಣ, ಇಂಧನ, ಆರೋಗ್ಯ, ನೀರಾವರಿ, ಪ್ರವಾಸೋದ್ಯಮ, ಕ್ರೀಡೆ ಮತ್ತು ಯುವಜನ, ಕೈಗಾರಿಕೆ, ಸಾರಿಗೆ ಮತ್ತು ಸಾಗಣೆ, ವಸತಿ, ಗ್ರಾಮೀಣಾಭಿವೃದ್ಧಿ, ದೂರ ಸಂಪರ್ಕ ಸಹಿತ 14 ವಲಯಗಳಲ್ಲಿ ಪಿಪಿಪಿ ಮಾದರಿಯಡಿ ಮೂಲ ಸೌಕರ್ಯ ಯೋಜನೆಗಳನ್ನು ಕೈಗೊಳ್ಳಲು ಕೇಂದ್ರ ಸರಕಾರ ಆದ್ಯತೆ ನೀಡಿದೆ. ರಾಜ್ಯದಲ್ಲೂ ಈ ಮಾದರಿಯಲ್ಲಿ 500 ಕೋ.ರೂ. ಮೌಲ್ಯದ ಯೋಜನೆಗಳಿಗೆ ಅನು ಮೋದನೆ ನೀಡಲಾಗಿದೆ ಎಂದರು.
ಬೆಂಗಳೂರು ಸಬ್‌ಅರ್ಬನ್ ರೈಲು ಯೋಜನೆಗೆ ಕೇಂದ್ರದಿಂದ ಅಂತಿಮ ಮಂಜೂರಾತಿ ಶೀಘ್ರವಾಗಿ ಪಡೆಯಬೇಕಿದೆ. ಇದಕ್ಕಾಗಿ ಅಧಿಕಾರಿ ಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸೂಚನೆ ನೀಡಿದರು.
Related Articles
Advertisement