Advertisement

ಪ್ರಭಾಸ್ ನಟನೆಯ ಬಹುನಿರೀಕ್ಷಿತ ಚಿತ್ರ ‘ಆದಿಪುರುಷ್’ ಬಿಡುಗಡೆ ದಿನಾಂಕ ಪ್ರಕಟ

08:40 PM Nov 19, 2020 | Suhan S |

ನವದೆಹಲಿ: ಯಂಗ್ ರೆಬಲ್ ಸ್ಟಾರ್, ಬಾಹುಬಲಿ ಖ್ಯಾತಿಯ ಪ್ರಭಾಸ್ ಅಭಿನಯಿಸುತ್ತಿರುವ ಬಹುನಿರೀಕ್ಷಿತ ‘ಆದಿಪುರುಷ್’ ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ತಿಳಿಸಿದೆ. ಇತ್ತೀಚೆಗಷ್ಟೇ ಚಿತ್ರದ ಟೈಟಲ್ ಪೋಸ್ಟರ್ ಮತ್ತು ಮೋಷನ್ ಪೋಸ್ಟರ್ ಬಿಡುಗಡೆಗೊಳಿಸಿರುವ ಚಿತ್ರತಂಡ ಇದೀಗ ಆಗಸ್ಟ್ 11 -2022ಕ್ಕೆ ಚಿತ್ರ ಬಿಡುಗಡೆ ಮಾಡುವುದಾಗಿ ತಿಳಿಸಿದೆ.

Advertisement

ಈ ಬಗ್ಗೆ ಚಿತ್ರದ ನಿರ್ದೇಶಕ ಓಂ ರಾವತ್ ತಮ್ಮ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಪ್ರಭಾಸ್ ಸದ್ಯ ‘ರಾಧೇಶ್ಯಾಮ್’ ಚಿತ್ರದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದು, ಇದು ಪೂರ್ಣಗೊಂಡ ಬಳಿಕವಷ್ಟೇ ‘ಆದಿಪುರುಷ್’ ಚಿತ್ರದ ಚಿತ್ರಿಕರಣದಲ್ಲಿ ಭಾಗಿಯಾಗಲಿದ್ದಾರೆ.

ಬಾಲಿವುಡ್‌ನ ಖ್ಯಾತ ನಿರ್ದೇಶಕ ಓಂ ರಾವತ್ ನಿರ್ದೇಶನದಲ್ಲಿ ಮೂಡಿಬರಲಿರುವ ‘ಆದಿಪುರುಷ್’ ಸಿನಿಮಾ ಇದಾಗಿದ್ದು, ಇದರಲ್ಲಿ ಪ್ರಭಾಸ್ ರಾಮನ ಪಾತ್ರಧಾರಿಯಾಗಿ ತೆರೆ ಮೇಲೆ ಬರಲಿದ್ದಾರೆ. ಇವರಿಗೆ ಎದುರಾಳಿಯಾಗಿ ಸೈಫ್ ಅಲಿಖಾನ್ ಬಣ್ಣ ಹಚ್ಚಲಿದ್ದಾರೆ.

ಇದನ್ನೂ ಓದಿ: ಸ್ಥಳೀಯ ಸಂಸ್ಥೆಗಳಿಗೆ ‘ಹೈ’ಶಾಕ್! ಇತ್ತೀಚೆಗೆ ಅಧ್ಯಕ್ಷ- ಉಪಾಧ್ಯಕ್ಷರಾದವರ ಮುಂದಿನ ದಾರಿಯೇನು?

ಆದಿಪುರುಷ್ ಸಿನಿಮಾ 3ಡಿ ಆವೃತ್ತಿಯಲ್ಲಿ ಕನ್ನಡ, ತೆಲುಗು, ಹಿಂದಿ, ತಮಿಳ್ ಮತ್ತು ಮಲಯಾಲಂ ಭಾಷೆಗಳಲ್ಲಿ ಬಿಡುಗಡೆಗೊಳ್ಳಲಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next