Advertisement
ಸಾಮಾನ್ಯವಾಗಿ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಬಲಿಕೊಡುವ ಸಂಪ್ರದಾಯವಿದ್ದು ಇದಕ್ಕಾಗಿ ಗೋವುಗಳನ್ನು ಸಹ ಬಳಕೆಮಾಡಲಾಗುತ್ತದೆ ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಗೋಹತ್ಯೆ ನಿಷೇಧ ಅನುಷ್ಠಾನ ಆಗಿರುವುದರಿಂದ ಗೋವುಗಳ ಹತ್ಯೆ ಯಾವುದೇ ಕಾರಣಕ್ಕೂ ನಡೆಯದಂತೆ ನೋಡಿಕೊಳ್ಳಲು ಪೊಲೀಸ್ ಇಲಾಖೆ ಹಾಗೂ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ತಿಳಿಸಲಾಗಿದೆ.
Related Articles
Advertisement
ಈಗಾಗಲೇ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಈ ಕುರಿತಾಗಿ ಸಭೆಗಳು ನಡೆದಿದ್ದು ಗಡಿಭಾಗದಲ್ಲಿ ಪೊಲೀಸ್ ಇಲಾಖೆಯ ಜೊತೆಗೆ ಸೇರಿ ಕಟ್ಟುನಿಟ್ಟಿನ ನಿಗಾ ಇಡಲು ತಿಳಿಸಿದ್ದಾರೆ.
ಪ್ರಾಣಿ ಕಲ್ಯಾಣ ಮಂಡಳಿಗೆ ಸದಸ್ಯರಿಗೆ ವಲಯವಾರು ಜವಾಬ್ದಾರಿ ಹಂಚಿಕೆ ಮಾಡಲಾಗಿದ್ದು ಜಿಲ್ಲಾ ಎಸ್.ಪಿ ಸಿ.ಎ ಜೊತೆಗೆ ಸಮನ್ವಯ ಸಾಧಿಸಿ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಅಕ್ರಮ ಗೋವುಗಳ ಸಾಗಣೆ ಆಗದಂತೆ ನೋಡಿಕೊಳ್ಳಲು ತಿಳಿಸಲಾಗಿದೆ.
ಗೋಹತ್ಯೆ ಕಂಡುಬಂದರೆ ಶಿಸ್ತುಕ್ರಮ:
ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾವಾರು ಜವಾಬ್ದಾರಿ ನೀಡಲಾಗಿದ್ದು ಅವರಿಗೆ ಸಂಬಂಧಪಟ್ಟ ಪ್ರದೇಶದಲ್ಲಿ ಗೋಹತ್ಯೆ ನಡೆದಿದ್ದು ಕಂಡುಬಂದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ.
ವದಂತಿಗಳಿಗೆ ಕಿವಿ ಕೊಡಬೇಡಿ:
ಸಮಾಜದಲ್ಲಿ ಸಾಮಾಜಿಕ ಸಾಮರಸ್ಯ ಕದಡಲು ಅನೇಕರು ಸಾಮಾಜಿಕ ಜಾಲತಾಣವನ್ನು ಮಾಧ್ಯಮವಾಗಿ ಸುಳ್ಳು ಸುದ್ದಿಗಳನ್ನು ಹರಿಬಿಡುತ್ತಾರೆ ಗೋಹತ್ಯೆ ಕುರಿತಾಗಿ ಯಾವುದೇ ಸುಳ್ಳು ಸುದ್ದಿ ಅಥವಾ ಸಂದೇಶಗಳನ್ನು ಹರಿಬಿಡುವುದು ಸಮಾಜದಲ್ಲಿ ಅಶಾಂತಿ ನಿರ್ಮಿಸಲು ಪ್ರಯತ್ನಿಸುವುದು ಕಂಡುಬಂದಲ್ಲಿ ಪೊಲೀಸ್ ಇಲಾಖೆ ಅಂಥವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಿದೆ ಎಂದು ಸಚಿವರು ತಿಳಿಸಿದ್ದಾರೆ.