Advertisement

ಗೋಹತ್ಯೆ ನಿಷೇಧ ಕಾಯ್ದೆ ಅನುಷ್ಠಾನದ ನಂತರ ರಾಜ್ಯದಲ್ಲಿ ಮೊದಲ ಪ್ರಕರಣ ದಾಖಲು: ಪ್ರಭು ಚವ್ಹಾಣ್

07:50 PM Jan 22, 2021 | Team Udayavani |

ಬೆಂಗಳೂರು: ಗೋಹತ್ಯೆ ನಿಷೇಧ ಕಾಯ್ದೆ ಅನುಷ್ಠಾನದ ನಂತರ ವಿಜಯಪುರ ಜಿಲ್ಲೆಯ ಕೂಡಗಿಯಲ್ಲಿ ಗೋಹತ್ಯೆ ಮಾಡಿ ಗೋಮಾಂಸ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಸಾರ್ವಜನಿಕರ ಮಾಹಿತಿ ಮೇರೆಗೆ ಪೊಲೀಸ್ ಇಲಾಖೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಕೃತ್ಯದಲ್ಲಿ ತೊಡಗಿದ್ದ ವ್ಯಕ್ತಿಯನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.

Advertisement

ಕೂಡಗಿ ಗ್ರಾಮದ ಬಳಿಯ ರೈಲ್ವೆ ಹಳಿ ಹತ್ತಿರದ ಖಾಸಗಿ ಶೆಡ್ ವೊಂದರಲ್ಲಿ ವ್ಯಕ್ತಿಯೊಬ್ಬ ಎತ್ತೊಂದನ್ನು ಕತ್ತರಿಸಿ ಮಾಂಸ ಮಾರಾಟದಲ್ಲಿ ತೊಡಗಿದ್ದ ವೇಳೆ  ಕೂಡಗಿ ಪಿಎಸ್ಐ ರೇಣುಕಾ ಜಕನೂರು ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಪೊಲೀಸ್ ಇಲಾಖೆಯ ಕ್ಷಿಪ್ರ ಕಾರ್ಯಕ್ಕೆ ಸಚಿವರು  ಶ್ಲಾಘಿಸಿದ್ದಾರೆ.

ಇದನ್ನೂ ಓದಿ: ಮಾರುಕಟ್ಟೆಗೆ ಲಗ್ಗೆ ಇಟ್ಟಿರುವ ಹಾನರ್ V40 5G ಸ್ಮಾರ್ಟ್ ಪೋನ್ ವೈಶಿಷ್ಟ್ಯತೆಗಳೇನು?

ಸಿಖಂದರ್ಸಾಬ್ ರಾಜಾಸಾಬ್ ಬೇಪಾರಿ (35) ಬಂಧಿತ ಆರೋಪಿ.‌ ಒಂದು ಎತ್ತನ್ನು ಕತ್ತರಿಸಿ ಮಾಂಸ ಮಾರಾಟ ಮಾಡುತ್ತಿದ್ದ ಸಾರ್ವಜನಿಕರ ಮಾಹಿತಿ ಮೆರೆಗೆ ಕೂಡಗಿ ಪೊಲೀಸರು ಸ್ಥಳಕ್ಕೆ ಧಾವಿಸಿ ಅಲ್ಲೇ ಇದ್ದ ಇನ್ನೊಂದು ಎತ್ತನ್ನು ರಕ್ಷಿಸಿ ಯಲಗೂರು ಗೋಶಾಲೆಗೆ ನೀಡಿದ್ದಾರೆ. ಕೂಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗೋಹತ್ಯೆ ನಿಷೇಧ ಕಾಯ್ದೆಯ ಅನುಷ್ಠಾನದ ನಂತರ ವಿಜಯಪುರ ಜಿಲ್ಲೆಯಲ್ಲಿ ರಾಜ್ಯದ ಮೊದಲ ಪ್ರಕರಣ ದಾಖಲಾಗಿದ್ದು ಸಾರ್ವಜನಿಕರ ಸಮಯ ಪ್ರಜ್ಞೆ ಹಾಗೂ ಪೊಲೀಸ್ ಇಲಾಖೆಯ ಕಾರ್ಯಾಚರಣೆಯಿಂದ ಒಂದು ಗೋವಿನ (ಎತ್ತು) ರಕ್ಷಣೆ ಆಗಿದ್ದು ಸಂತಸ ತಂದಿದೆ.

Advertisement

ಸಾರ್ವಜನಿಕರಲ್ಲಿ ಮನವಿ

ಗೋವುಗಳ ಅಕ್ರಮ ಸಾಗಣೆ ಮತ್ತು ಗೋಹತ್ಯೆ ಮಾಡಿ ಮಾಂಸ ಮಾರಾಟ ಮಾಡುವುದು ಗಮನಕ್ಕೆ ಬಂದರೆ ತಕ್ಷಣದಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ದೂರು ನೀಡಿ ಗೋವುಗಳ ರಕ್ಷಣೆಗೆ ಮುಂದಾಗಿ ನಿಮ್ಮ ಸಮಯ ಪ್ರಜ್ಞೆ ಮೂಕ ಪ್ರಾಣಿಯ ಜೀವ ಉಳಿಸಬಲ್ಲದು. ಕಾನೂನನ್ನು ಕೈಗೆತ್ತಿಕೊಳ್ಳದೆ ಆರಕ್ಷರ ಸಹಾಯದಿಂದ ರಕ್ಷಣೆಗೆ ಮುಂದಾಗಬೇಕು ಎಂದು ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ:  ಹುಣಸೋಡು ದುರಂತ: ಅಕ್ರಮ ಗಣಿಗಾರಿಕೆಗಳನ್ನು ಈ ಕೂಡಲೇ ಸ್ಥಗಿತಗೊಳಿಸಿ; ಸಿದ್ದು ಆಗ್ರಹ

Advertisement

Udayavani is now on Telegram. Click here to join our channel and stay updated with the latest news.

Next