Advertisement

ನರೇಂದ್ರಮೋದಿ ಅವರು ಯೋಗದ ಮಹತ್ವ ಜಗತ್ತಿಗೆ ಸಾರಿದವರು: ಪ್ರಭು ಚೌವ್ಹಾಣ್‌

09:38 PM Jun 20, 2022 | Team Udayavani |

ಬೆಂಗಳೂರು: ಆರೋಗ್ಯ ಮತ್ತು ಸರ್ವತೋಮುಖ ಬೆಳವಣಿಗೆಗೆ ಯೋಗ ಉತ್ತಮ ಸಾಧನ. ಯೋಗ ಕೇವಲ ವ್ಯಾಯಾಮವಲ್ಲ, ಇದು ವಿಶ್ವ ಮತ್ತು ಪ್ರಕೃತಿಯೊಂದಿಗೆ ನಮ್ಮತನವನ್ನು ಒಂದಾಗಿಸುವ ವಿದ್ಯೆಯಾಗಿದೆ. ಯೋಗವು ಬದುಕನ್ನು ಬದಲಿಸುವ ಮತ್ತು ಆತ್ಮಸಾಕ್ಷಿಯ ಸೃಷ್ಟಿ ಎಂದು ಜಗತ್ತಿಗೆ ಸಾರಿದವರು ಪ್ರಧಾನಿ ನರೇಂದ್ರ ಮೋದಿ ಎಂದು ಪಶು ಸಂಗೋಪನಾ ಸಚಿವ ಪ್ರಭು ಚೌವ್ಹಾಣ್‌ ತಿಳಿಸಿದ್ದಾರೆ.

Advertisement

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಯೋಗವು 6000 ವರ್ಷಕ್ಕೂ ಹಳೆಯದಾದ ಭೌತಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಅಭ್ಯಾಸವಾಗಿದೆ. ಪ್ರತಿವರ್ಷ ಯೊಗದ ದಿನಾಚರಣೆಯು ಯೋಗ, ಧ್ಯಾನ, ಸಭೆಗಳು ಚರ್ಚೆಗಳು, ಸಾಂಸ್ಕೃತಿಕ ಪ್ರದರ್ಶನಗಳು ಇತ್ಯಾದಿಗಳನ್ನು ಅಭ್ಯಸಿಸುವುದರ ಮೂಲಕ ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಯೋಗ ದಿನವನ್ನು ಆಚರಿಸಲಾಗುತ್ತದೆ.

ನರೇಂದ್ರ ಮೋದಿ ಅವರು ಭಾರತದ ಪ್ರಧಾನಿಯಾಗಿ ಮೊದಲ ಬಾರಿ ಅಧಿಕಾರ ವಹಿಸಿಕೊಂಡ ವರ್ಷವೇ 2014ರ ಸೆಪ್ಟೆಂಬರ್‌ನಲ್ಲಿ ನಡೆದ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಯೋಗದ ಮಹತ್ವವನ್ನು ಸಾರಿದರು. ಯೋಗವು ವಿಶ್ವ ಶಾಂತಿಗೂ ಪೂರಕ ಎನ್ನುವುದನ್ನು ವಿಶ್ವ ಸಂಸ್ಥೆಯ ಸದಸ್ಯರ ರಾಷ್ಟ್ರಗಳಿಗೆ ಮನವರಿಕೆ ಮಾಡಿಕೊಟ್ಟರು. ಆ ವೇಳೆ ವಿಶ್ವ ಸಂಸ್ಥೆಯ ಮುಂದೆ ಯೋಗ ದಿನ ಆಚರಣೆಯ ಪ್ರಸ್ತಾವನೆಯನ್ನು ಮುಂದಿಟ್ಟರು. ಇದನ್ನು ವಿಶ್ವ ಸಂಸ್ಥೆ ಮಾನ್ಯ ಮಾಡಿತು.

ನಂತರ ತನ್ನ ಎಲ್ಲ ಸದಸ್ಯ ರಾಷ್ಟ್ರಗಳ ಅಭಿಪ್ರಾಯ ಸಂಗ್ರಹಿಸಿ, 2015ರಲ್ಲಿ ಜೂನ್‌ 21ನ್ನು ವಿಶ್ವ ಯೋಗ ದಿನ ಎಂದು ಘೋಷಿಸಿತು. ಅದರೊಂದಿಗೆ, ಭಾರತಕ್ಕಷ್ಟೆೈ ಸೀಮಿತವಾಗಿದ್ದ, ಕೆಲವು ಆಸಕ್ತ ವಿದೇಶಿಗರಷ್ಟೆೈ ಮಾಡುತ್ತಿದ್ದ ಯೋಗವನ್ನು ಪ್ರಪಂಚದಾದ್ಯಂತ ಸಾಮೂಹಿಕವಾಗಿ ಅಭ್ಯಸಿಸುವಂತೆ ಮಾಡುವಲ್ಲಿ ಮೋದಿ ಯಶಸ್ವಿಯಾದರು ಎಂದು ತಿಳಿಸಿದ್ದಾರೆ.

ಪ್ರಧಾನಿ ಮೋದಿ ಅವರ ಭಾಷಣದ ಬಳಿಕ 2014ರ ಡಿಸೆಂಬರ್‌ 11ರಂದು ವಿಶ್ವ ಸಂಸ್ಥೆಯಲ್ಲಿ ಮಸೂದೆಯೊಂದನ್ನು ಮಂಡಿಸಲಾಯಿತು. ಭಾರತದ ವಿಶ್ವ ಸಂಸ್ಥೆಯ ಪ್ರತಿನಿಧಿ ಅಶೋಕ್‌ ಮುಖರ್ಜಿ ಅವರು ಕರಡನ್ನು ಸಿದ್ಧಪಡಿಸಿ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಂಡಿಸಿದರು. ಈ ಕರಡಿಗೆ ಯಾವುದೇ ವಿರೋಧವಿಲ್ಲದೆ 177 ದೇಶಗಳು ಒಪ್ಪಿದವು. ಒಂದೂ ಮತ ಚಲಾವಣೆಯಾಗದೆ ಯೋಗ ದಿನ ಆಚರಣೆಯ ಕರಡು ಪ್ರತಿ ಅಂಗೀಕಾರವಾಯಿತು. ಬಳಿಕ ಮಸೂದೆಯನ್ನು ಅಂಗೀಕರಿಸಲಾಯಿತು. ಇದು ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ತಕರಾರು ಇಲ್ಲದೆ, ಹೆಚ್ಚಿನ ಬೆಂಬಲ ಪಡೆದು ಅಂಗೀಕಾರಗೊಂಡ ಮಸೂದೆ ಎಂಬ ಖ್ಯಾತಿಯನ್ನು ಹೊಂದಿದೆ ಎಂದು ತಿಳಿಸಿದ್ದಾರೆ.

Advertisement

8ನೇ ಅಂತರಾಷ್ಟ್ರೀಯ ಯೋಗ
ಕಳೆದ ಎರಡು ವರ್ಷಗಳಿಂದ ಕೊರೋನಾ ಕಾರಣದಿಂದ ಎಲ್ಲಿಯೂ ಯೋಗ ದಿನ ಆಚರಿಸಲು ಸಾಧ್ಯವಾಗಿರಲಿಲ್ಲ. 8ನೇ ಅಂತರಾಷ್ಟ್ರೀಯ ಯೋಗ ದಿನ ಆಚರಣೆಯು ಸಾಂಸ್ಕೃತಿಕ ನಗರಿ ಮೈಸೂರಲ್ಲಿ ಆಚರಿಸುತ್ತಿರುವುದು ಕರುನಾಡಿನ ಕೀರ್ತಿ ಪತಾಕೆಯು ವಿಶ್ವದÇÉೆಡೆ ಪಸರಿಸಲಿದೆ. ಡ್ರಾಯಿಂಗ್‌ ರೂಮ್‌ ನಿಂದ ಬೋರ್ಡ್‌ ರೂಮಿನವರೆಗೆ, ನಗರದ ಉದ್ಯಾವನಗಳಿಂದ ಹಿಡಿದು ಕ್ರೀಡಾ ಸಂಕೀರ್ಣದವರೆಗೆ ಇಂದು ಯೋಗ ಮಾಡಲಾಗುತ್ತಿದೆ. ಇಂದಿನ ಬದಲಾಗುತ್ತಿರುವ ಕಾಲದಲ್ಲಿ ನಾವು ಆರೋಗ್ಯದ ಮೇಲೆ ಗಮನ ಹರಿಸಬೇಕಿದೆ. ಈ ಶಕ್ತಿ ಸಿಗಲು ಯೋಗದಿಂದ ಮಾತ್ರ ಸಾಧ್ಯ ಎಂದು ಸಾರಿದ ನರೇಂದ್ರಮೋದಿ ಅವರ ಆದರ್ಶ ಇಡೀ ವಿಶ್ವಕ್ಕೆ ಮಾದರಿಯಾಗಿದೆ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next