Advertisement

ಬ್ರಿಮ್ಸ್ ಮೂಲ ಸೌಕರ್ಯಕ್ಕೆ ರೂ.10 ಕೋಟಿ ಹೆಚ್ಚುವರಿ ಅನುದಾನ : ಸಚಿವ ಪ್ರಭು ಚವ್ಹಾಣ್

07:07 PM Jun 21, 2021 | Team Udayavani |

ಬೆಂಗಳೂರು  : ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಕೇಂದ್ರೀಕೃತ ಗ್ರಂಥಾಲಯ ಹಾಗೂ ಪರೀಕ್ಷಾ ಕೊಠಡಿಗಳ ನಿರ್ಮಾಣಕ್ಕೆ ಪರಿಷ್ಕೃತ ರೂ.10.77 ಕೋಟಿ ಅನುದಾನ ನೀಡಲು ಇಂದು ನಡೆದ ಸಚಿವ ಸಂಪುಟದಲ್ಲಿ ಅನುಮೋದನೆ ದೊರೆತಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಹರ್ಷ ವ್ಯಕ್ತಪಡಿಸಿದ್ದಾರೆ.

Advertisement

ಕೋವಿಡ್ ಸಂದರ್ಭದಲ್ಲಿ ಈ ಭಾಗದ ಜನರ ಆರೋಗ್ಯ ರಕ್ಷಣೆಗೆ ಬ್ರಿಮ್ಸ್ ಬೆನ್ನೆಲುಬಾಗಿತ್ತು ಇದರ ಉನ್ನತೀಕರಣ ಮತ್ತು ಅಭಿವೃದ್ದಿ ಈ ಭಾಗದ ಜನರ ಆರೋಗ್ಯ ಸೇವೆಯನ್ನು ಹೆಚ್ಚು ಬಲಪಡಿಸಿದಂತಾಗುತ್ತದೆ ಎಂದು ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.

ಭಾರತ ಸರ್ಕಾರವು ಕೇಂದ್ರ ಪುರಸ್ಕೃತ ಯೋಜನೆ ಅಡಿಯಲ್ಲಿ ರೂ.36 ಕೋಟಿ ಈಗಾಗಲೇ ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಮಂಜೂರು ಮಾಡಲಾಗಿದೆ. ಸಂಸ್ಥೆಯಲ್ಲಿ ಕೇಂದ್ರೀಕೃತ ಗ್ರಂಥಾಲಯ ಹಾಗೂ ಪರೀಕ್ಷಾ ಕೊಠಡಿ ನಿರ್ಮಾಣ ಕಾಮಗಾರಿಯನ್ನು ರೂ.7.50 ಕೋಟಿ ವೆಚ್ಚದಲ್ಲಿ ಕೈಗೊಳ್ಳಲು ಮತ್ತು ರೂ.15.22 ಕೋಟಿ ಉಪಕರಣಗಳನ್ನು ಖರೀದಿಸಲು ಒಟ್ಟು ರೂ. 17.50 ಕೋಟಿಗೆ ಆಡಳಿತಾತ್ಮಕ ಅನುಮೊದನೆ ನೀಡಿ ಈ ಪೈಕಿ ಕೇಂದ್ರ ಹಾಗೂ ರಾಜ್ಯದ ಪಾಲು ಸೇರಿದಂತೆ ರೂ.15.22 ಕೋಟಿ ಈಗಾಗಲೇ ಅನುದಾನವನ್ನು ಬಿಡುಗಡೆ ಮಾಡಲಾಗಿದೆ.

ಇದನ್ನೂ ಓದಿ :ಬಿಎಸ್ಸಿ ಅಗ್ರಿ ಸೀಟು ಮೀಸಲಾತಿ  50%ಕ್ಕೆ ಹೆಚ್ಚಳ : ಸಚಿವ ಬಸವರಾಜ್ ಬೊಮ್ಮಾಯಿ

ಈಗಾಗಲೇ ಸೀಟುಗಳ ಮಿತಿಯನ್ನು 100 ರಿಂದ 150 ಕ್ಕೆ ಹೆಚ್ಚಿಸಲಾಗಿದೆ. ಬೀದರ್ ವೈದ್ಯಕೀಯ ವಿಜ್ಞಾನ ಸಂಸ್ಥೆ ಮೇಲ್ದರ್ಜೆಗೇರಿರುವುದರಿಂದ ಉಪನ್ಯಾಸಕರ ಕೊಠಡಿ, ಆಡಿಟೋರಿಯಂ, ತಾಯಿ ಮತ್ತು ಮಕ್ಕಳ ಆರೋಗ್ಯ ಕೇಂದ್ರ ಹಾಗೂ ಹಾಸ್ಟೇಲ್‌ಗಳ ಉನ್ನತೀಕರಣ ಎಂ.ಸಿ.ಐ ಮಾನದಂಡಗಳ ಪ್ರಕಾರ ಸಂಸ್ಥೆಗಳ ಅವಶ್ಯಕತೆಗಳನ್ನು ಪೂರೈಸುವಲ್ಲಿ ಮತ್ತು ವಿದ್ಯಾರ್ಥಿಗಳಿಗೆ ಹೆಚ್ಚಿನ ಸೌಲಭ್ಯ ನೀಡುವಲ್ಲಿ ಸಹಕಾರಿಯಾಗಿದೆ. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಆರೋಗ್ಯ ಸಚಿವರಾದ ಡಾ. ಹರ್ಷ ವರ್ಧನ್, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ. ಸುಧಾಕರ ಹಾಗೂ ಈ ಭಾಗದ ಸಂಸದರಿಗೆ ಧನ್ಯವಾದ ತಿಳಿಸುತ್ತೇನೆ. ಅಲ್ಲದೇ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಬದ್ಧವಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next