ಬೀದರ್: ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಲಾಕ್ ಡೌನ್ ಒಂದೇ ಪರಿಹಾರವಲ್ಲ. ಇಂದು ಮಧ್ಯಾಹ್ನ ಜಿಲ್ಲೆಯ ಜನಪ್ರತಿನಿಧಿ, ಅಧಿಕಾರಿಗಳು ಮತ್ತು ಟಾಸ್ಕ್ ಫೋರ್ಸ್ ಕಮಿಟಿ ಜತೆ ಸಮಾಲೋಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಉಸ್ತುವಾರಿ ಸಚಿವ ಪ್ರಭು ಚೌಹಾಣ್ ಹೇಳಿದ್ದಾರೆ
ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಿಎಂ ಯಡಿಯೂರಪ್ಪ ಜೊತೆ ಡಿಸಿ ಮತ್ತು ಜಿಪಂ ಸಿಇಒ ಜತೆ ವಿಡಿಯೋ ಕಾನ್ಪರೆನ್ಸ್ ನಡೆಸಿದ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು.
ವಿಡಿಯೋ ಕಾನ್ಫರೆನ್ಸ್ ನಲ್ಲಿ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋವಿಡ್-19 ಸೊಂಕಿತರ ಪ್ರಕರಣ ತಡೆಯಲು ಬೇಕಾದ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಲಾಕ್ ಡೌನ್ ಜಾರಿ ಕುರಿತು ನಿರ್ಣಯವನ್ನು ಪಡೆಯಲು ಸಚಿವರಾದ ನನಗೆ ಮತ್ತು ನಮ್ಮ ಅಧಿಕಾರಿಗಳ ತಂಡಕ್ಕೆ ನೀಡಿದ್ದಾರೆ. ಜತೆಗೆ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ಪಡೆಯಲು ಸೂಚಿಸಿದ್ದಾರೆ. ಹೀಗಾಗಿ ಸಾಯಂಕಾಲದ ಸಭೆಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರಕ್ಕೆ ಬಂದು ಶೀಘ್ರ ಘೋಷಣೆ ಮಾಡಲಾಗುವುದು ಎಂದು ಹೇಳಿದರು.
ಕೋವಿಡ್ ನಿಯಂತ್ರಣ ಕುರಿತಂತೆ ಜನ ಮುನ್ನೆಚ್ಚರಿಕೆ ವಹಿಸಬೇಕಿದೆ. ಬೀದರ ಜಿಲ್ಲೆ ಮಹರಾಷ್ಟ್ರ, ತೆಲಂಗಾಣ ಗಡಿ ಜಿಲ್ಲೆಯಾಗಿದ್ದು ಎರಡು ರಾಜ್ಯಗಳಿಗೆ ಸಂಪರ್ಕಕಲ್ಪಿಸುವ ಜಿಲ್ಲೆ ನಮ್ಮದಾಗಿದೆ. ಹೀಗಾಗಿ ಜನತೆ ಹೆಚ್ವಿನ ಮುಂಜಾಗ್ರತ ವಹಿಸಬೇಕಿದೆ. ಮುಖ್ಯಮಂತ್ರಿಗಳಿಗೆ ಈ ಬಗ್ಗೆ ಮಾಹಿತಿ ನೀಡಿದ್ದೆನೆ ಎಂದರು.