Advertisement

ಗೋವಾದಲ್ಲಿ ಬಿಜೆಪಿ 30 ಕ್ಷೇತ್ರದಲ್ಲಿ ಗೆಲುವು ಸಾಧಿಸಿ ಅಧಿಕಾರ ಹಿಡಿಯಲಿದೆ : ಪ್ರಭು ಚವ್ಹಾಣ್

08:29 PM Feb 02, 2022 | Team Udayavani |

ಬೆಂಗಳೂರು : ಪ್ರಸ್ತುತ ಗೋವಾ ರಾಜ್ಯದ 40 ವಿಧಾನಸಭಾ ಕ್ಷೇತ್ರಗಳಿಗೆ ಫೆ.14ರಂದು ನಡೆಯಲಿರುವ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು 30 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಪಶು ಸಂಗೋಪ‌ನಾ ಸಚಿವರಾದ ಶ್ರೀ ಪ್ರಭು ಬಿ.ಚವ್ಹಾಣ್ ಅವರು ವಿಶ್ವಾಸ ವ್ಯಕ್ತಪಡಿಸಿದರು.

Advertisement

ಗೋವಾ ರಾಜ್ಯದ ಪಣಜಿಯಲ್ಲಿರುವ ಭಾರತೀಯ ಜನತಾ ಪಕ್ಷದ ಚುನಾವಣಾ ಕಾರ್ಯಾಲಯದಲ್ಲಿ ಹಿರಿಯ ಮುಖಂಡರುಗಳು ಹಾಗೂ ವಿವಿಧ ಮೋರ್ಚಾಗಳ ಪ್ರಮುಖರೊಂದಿಗೆ ಸಭೆ ನಡೆಸಿದ ಸಚವ ಪ್ರಭು ಬಿ.ಚವ್ಹಾಣ್ ಅವರು, ಗೋವಾದಲ್ಲಿ ಬಿಜೆಪಿ ಪಕ್ಷವು ಅತ್ಯಂತ ದೊಡ್ಡ ಪಕ್ಷವಾಗಿ ಹೊರಬರಲಿರುವುದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವೀಸ್, ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜಸಿಂಗ್, ಗೋವಾ ರಾಜ್ಯದ ಬಿಜೆಪಿ ಅಧ್ಯಕ್ಷ ಸದಾನಂದ ತನವಾಡೆ, ಸಂಘಟನಾ ಕಾರ್ಯದರ್ಶಿ ಸತೀಶ್ ದೋಂಡ್ ಅವರೊಂದಿಗೆ ಗೋವಾ ಚುನಾವಣೆಯ ಪ್ರಚಾರ ಹಾಗೂ ಚುನಾವಣಾ ತಂತ್ರಗಾರಿಕೆಗಳನ್ನು ಎಣೆಯಲಾಗಿದೆ. ಬಿಜೆಪಿ ಗೆಲುವು ಸಾಧಿಸಲಿದೆ.

ಕಲಂಗೂಟ್ ಮತ್ತು ವಾಸ್ಕೋ ವಿಧಾನಸಭಾ ಕ್ಷೇತ್ರದಲ್ಲಿ ಪ್ರತಿನಿತ್ಯ ಪ್ರಚಾರದಲ್ಲಿ ತೋಡಗಿಸಿಕೊಂಡು ಮತಯಾಚಿಸುತ್ತಿದ್ದು, ಬಿಜೆಪಿ ಪಕ್ಷದ ಅಭ್ಯರ್ಥಿಗಳನ್ನು ಚುನಾಯಿಸುವಂತೆ ಕೋರುತ್ತಿದ್ದೇನೆ. ಗೋವಾದಲ್ಲಿ ಬಿಜೆಪಿ ಪರವಾದ ಅಲೆ ಸೃಷ್ಠಿಯಾಗಿದೆ.

ಇದನ್ನೂ ಓದಿ : ರಾಜ್ಯದಲ್ಲಿ ಇಂದು 20,505 ಹೊಸ ಕೋವಿಡ್ ಪ್ರಕರಣಗಳು ಪತ್ತೆ : 81 ಮಂದಿ ಬಲಿ

Advertisement

ಕರ್ನಾಟಕದ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ರಾಜ್ಯ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಅವರೊಂದಿಗೆ ಚುನಾವಣಾ ಪ್ರಚಾರ ಕಾರ್ಯ ಮತ್ತು ಕಾರ್ಯತಂತ್ರ ರೂಪಿಸಲಾಗಿದೆ. ಗೋವಾ ಮತ್ತು ಕರ್ನಾಟಕದ ನಡುವೆ ಉತ್ತಮ ನಂಟಿದೆ. ಅದನ್ನು ಚುನಾವಣೆಯಲ್ಲಿ ಪರಿಣಾಮಕಾರಿಯಾಗಿ ಬಳಸಿಕೊಂಡು ಅತ್ಯಧಿಕ ಸಂಖ್ಯೆಯಲ್ಲಿರುವ ಬಂಜಾರ ಸಮುದಾಯ ಹಾಗೂ ಕನ್ನಡಿಗರ ಮತ ಸೆಳೆಯಲು ಕಾರ್ಯತಂತ್ರ ರೂಪಿಸಲಾಗಿದ್ದು, ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಗೋವಾದಲ್ಲಿ ಬಿಜೆಪಿ ಅಧಿಕಾರ ಹಿಡಿಯುವುದು ಖಚಿತ ಎಂದು ಪ್ರಭು ಚವ್ಹಾಣ್ ಖಚಿತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next