Advertisement

ಪ್ರಾಯೋಗಿಕ ಬೋಧನೆ ಪರಿಣಾಮಕಾರಿ

12:31 PM Jan 24, 2022 | Team Udayavani |

ಜೇವರ್ಗಿ: ವಿದ್ಯಾರ್ಥಿಗಳಿಗೆ ತರಗತಿಯಲ್ಲಿ ಸೈದ್ಧಾಂತಿಕವಾಗಿ ಬೋಧಿಸಿದರೆ ಸಾಲದು, ಪ್ರಾಯೋಗಿಕ ಜ್ಞಾನವೂ ಅವಶ್ಯಕವಾಗಿದೆ ಎಂದು ಪ್ರಾಚಾರ್ಯ ಮೊಹಮ್ಮದ್‌ ಅಲ್ಲಾವುದ್ದೀನ್‌ ಸಾಗರ ಹೇಳಿದರು.

Advertisement

ಪಟ್ಟಣದ ಬಸವೇಶ್ವರ ವೃತ್ತದ ಬಳಿಯಿರುವ ಬಾಲಕರ ಸರ್ಕಾರಿ ಪಿಯು ಕಾಲೇಜಿನಲ್ಲಿ ನಡೆದ ಭೌತಶಾಸ್ತ್ರ ವಿಷಯದ ಪ್ರಾಯೋಗಿಕ ತರಗತಿಗನ್ನು ವೀಕ್ಷಿಸಿ, ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ವಿಜ್ಞಾನ ಕ್ಷೇತ್ರದಲ್ಲಿ ಪ್ರಯೋಗಾಲಯಗಳು ಮಹತ್ವದ ಪಾತ್ರ ವಹಿಸುತ್ತವೆ. ತರಗತಿಯಲ್ಲಿ ಅಧ್ಯಯನ ಮಾಡಿದ ವಿಷಯವನ್ನು ಪ್ರಾಯೋಗಿಕವಾಗಿ ಒಳಪಡಿಸಿ ಮೌಲ್ಯಮಾಪನ ಮಾಡಲಾಗುತ್ತದೆ. ಪ್ರಯೋಗಾಲಯಗಳು ವಿದ್ಯಾರ್ಥಿಗಳಲ್ಲಿ ಸಂಶೋಧನಾ ಮನೋಭಾವ, ಸೃಜನಶೀಲತೆ, ಕೌಶಲ್ಯ ಬೆಳೆಸುತ್ತವೆ. ವಿಷಯದ ಪರಿಕಲ್ಪನೆಯನ್ನು ಸರಳವಾಗಿ ಅರ್ಥ ಮಾಡಿಕೊಳ್ಳಲು ಸಹಕಾರಿಯಾಗುತ್ತದೆ ಎಂದರು.

ಭೌತಶಾಸ್ತ್ರ ಉಪನ್ಯಾಸಕ ಶಂಕ್ರೆಪ್ಪ ಹೊಸದೊಡ್ಡಿ, ಎನ್‌.ಎಸ್‌.ಎಸ್‌ ಅಧಿಕಾರಿ ಎಚ್‌.ಬಿ.ಪಾಟೀಲ, ಉಪನ್ಯಾಸಕರಾದ ಚಂದ್ರಪ್ರಭ ಕಮಲಾಪುರಕರ್‌, ಶರಣಮ್ಮ ಭಾವಿಕಟ್ಟಿ, ನಯಿಮಾ ನಾಹಿದ್‌, ಶಂಕ್ರೆಪ್ಪ ಹೊಸದೊಡ್ಡಿ, ಪ್ರಥಮ ದರ್ಜೆ ಸಹಾಯಕ ನೇಸರ ಎಂ. ಬೀಳಗಿ ಹಾಗೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next