Advertisement

ಪ್ರಧಾನಮಂತ್ರಿ ಆವಾಸ್‌ ಯೋಜನೆ : 80 ಸಾವಿರ ಬಹುಮಹಡಿ ಮನೆಗಳಿಗೆ ಸೀಮಿತ : ವಿ.ಸೋಮಣ್ಣ

08:17 PM Jun 25, 2021 | Team Udayavani |

ಬೆಂಗಳೂರು: ಪ್ರಧಾನಮಂತ್ರಿ ಅವಾಸ್‌ ಯೋಜನೆಯಡಿ ಬಡ ಜನರಿಗೆ ವಿತರಿಸಲು ಬೆಂಗಳೂರು ನಗರ ಜಿಲ್ಲೆಯಲ್ಲಿ ನಿರ್ಮಾಣ ಮಾಡುತ್ತಿರುವ ಒಂದು ಲಕ್ಷ ಬಹುಮಹಡಿ ಮನೆಗಳ ಯೋಜನೆ 80 ಸಾವಿರಕ್ಕೆ ಸೀಮಿತಗೊಳ್ಳಲಿದೆ.

Advertisement

ಜಮೀನು ಕೊರತೆ ಹಿನ್ನೆಲೆಯಲ್ಲಿ ಒಂದು ಲಕ್ಷ ಮನೆಗಳ ಬದಲಿಗೆ 80 ಸಾವಿರ ಮನೆ ಮಾತ್ರ ನಿರ್ಮಾಣವಾಗಲಿದೆ. ಆಗಸ್ಟ್‌ 15 ರೊಳಗೆ 5 ಸಾವಿರ ಮನೆಗಳು ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

ವಿಕಾಸಸೌಧಲ್ಲಿ ಶುಕ್ರವಾರ ರಾಜೀವ್‌ಗಾಂಧಿ ವಸತಿ ನಿಗಮದ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಕಂದಾಯ ಇಲಾಖೆ ಹಾಗೂ ಇತರೆ ಸರ್ಕಾರಿ ಸಂಸ್ಥೆಗಳಿಂದ 515 ಎಕರೆ ಭೂಮಿ ಪಡೆಯಲಾಗಿದೆ.

ಮೊದಲ ಹಂತದಲ್ಲಿ 46,998 ಮನೆಗಳ ನಿರ್ಮಾಣಕ್ಕೆ ಕಾರ್ಯಾದೇಶ ನೀಡಲಾಗಿದ್ದು, 42361 ಮನೆಗಳ ನಿರ್ಮಾಣ ಕಾರ್ಯ ವಿವಿಧ ಹಂತಗಳಲ್ಲಿ ಪ್ರಗತಿಯಲ್ಲಿದೆ, 2022ರ ನವೆಂಬರ್‌ ವೇಳೆಗೆ 80,000 ಮನೆಗಳನ್ನು ನಿರ್ಮಿಸಿ ಅರ್ಹರಿಗೆ ವಿತರಿಸಲಾಗುವುದು ಎಂದು ಹೇಳಿದರು.

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಗೆ ಸೀಮಿತವಾಗಿದ್ದ ಸೌಲಭ್ಯವನ್ನು ಬೆಂಗಳೂರು ನಗರ ಜಿಲ್ಲೆಗೆ ವಿಸ್ತರಿಸಲಾಗಿದ್ದು, ವಾರ್ಷಿಕ ಆದಾಯದ ಮಿತಿಯನ್ನು 87,600 ರೂ.ಗಳಿಂದ 3 ಲಕ್ಷಕ್ಕೆ ಏರಿಸಲಾಗಿದೆ ಎಂದು ತಿಳಿಸಿದರು. ಸಭೆಯಲ್ಲಿ ರಾಜೀವ್‌ ಗಾಂಧಿ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಬಸವರಾಜ್‌ ಮತ್ತಿತರರು ಪಾಲ್ಗೊಂಡಿದ್ದರು.

Advertisement

ಹೊಸದಾಗಿ ಅರ್ಜಿ ಹಾಕಬೇಕು
ಯೋಜನೆಯಡಿ ಈಗಾಗಲ 65 ಸಾವಿರ ಅರ್ಜಿ ಸಲ್ಲಿಸಲಾಗಿತ್ತಾದರೂ ಆದಾಯ ಮಿತಿ 87,600 ರೂ.ನಿಂದ ಮೂರು ಲಕ್ಷ ರೂ.ಗೆ ಏರಿಕೆ ಮಾಡಿರುವುದು ಹಾಗೂ ಬಿಬಿಎಂಪಿ ವ್ಯಾಪ್ತಿಯೂ ಸೇರಿ ಬೆಂಗಳೂರು ನಗರ ಜಿಲ್ಲೆಗೆ ಯೋಜನೆ ವ್ಯಾಪ್ತಿ ವಿಸ್ತರಿಸಿರುವುದರಿಂದ ಜುಲೈ 30 ರಿಂದ (ಬುಧವಾರ) ಹೊಸದಾಗಿ ಅರ್ಜಿ ಸ್ವೀಕಾರ ಮಾಡಲಾಗುವುದು. ಈ ಹಿಂದೆ ಅರ್ಜಿ ಸಲ್ಲಿಸಿದವರೂ ಹಾಕಬಹುದು.
– ವಿ.ಸೋಮಣ್ಣ

Advertisement

Udayavani is now on Telegram. Click here to join our channel and stay updated with the latest news.

Next