Advertisement
ಅಂತ್ಯೋದಯ ಕಾರ್ಡಿನ ಪ್ರತಿ ಸದಸ್ಯರಿಗೆ ಎಪ್ರಿಲ್ ಮತ್ತು ಮೇ ತಿಂಗಳಿಗೆ 5 ಕೆ.ಜಿ.ಯಂತೆ ಒಟ್ಟು 10 ಕೆ.ಜಿ. ಅಕ್ಕಿ ಹಾಗೂ ಪ್ರತಿ ಕಾರ್ಡಿಗೆ 1 ಕೆ.ಜಿ. ತೊಗರಿಬೇಳೆ ಉಚಿತವಾಗಿ ವಿತರಿಸಲಾಗುವುದು. ಪಿಎಚ್ ಎಚ್ ಕಾರ್ಡಿನ ಪ್ರತಿ ಸದಸ್ಯರಿಗೆ ಎಪ್ರಿಲ್ ಮತ್ತು ಮೇ ತಿಂಗಳ ತಿಂಗಳಿಗೆ 5 ಕೆ.ಜಿ.ಯಂತೆ ಒಟ್ಟು 10 ಕೆ.ಜಿ. ಅಕ್ಕಿ ಹಾಗೂ ಪ್ರತಿ ಕಾರ್ಡಿಗೆ 1 ಕೆಜಿ ತೊಗರಿಬೇಳೆ ಉಚಿತವಾಗಿ ವಿತರಿಸಲಾಗುವುದು. ಪಿಎಚ್ ಎಚ್ ಪ್ರತಿ ಕಾರ್ಡಿಗೆ ತಿಂಗಳಿಗೆ 2 ಕೆ.ಜಿ.ಯಂತೆ ಒಟ್ಟು 4 ಕೆ.ಜಿ. ಗೋಧಿಯನ್ನು ಉಚಿತವಾಗಿ ವಿತರಿಸಲಾಗುವುದು. ಹೊಸದಾಗಿ ಅರ್ಜಿ ಸಲ್ಲಿಸಿರುವ ಪಿಎಚ್.ಹೆಚ್ (ಬಿಪಿಎಲ್) ಫಲಾನುಭವಿಗಳಿಗೆ ಪ್ರತಿ ಅರ್ಜಿಗೆ 10 ಕೆ.ಜಿ. ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುವುದು. ಆಹಾರಧಾನ್ಯ ಪಡೆಯಲು ನೋಂದಾಯಿಸದೆ ಇರುವ ಎನ್.ಪಿ.ಎಚ್.ಎಚ್. (ಎಪಿಎಲ್) ಏಕ ಸದಸ್ಯ ಪಡಿತರ ಚೀಟಿ ಕಾರ್ಡಿಗೆ 5 ಕೆ.ಜಿ. ಅಕ್ಕಿ ಮತ್ತು ಎರಡು ಮತ್ತು ಹೆಚ್ಚಿನ ಸದಸ್ಯರಿರುವ ಕಾರ್ಡುಗಳಿಗೆ 10 ಕೆ.ಜಿ. ಅಕ್ಕಿ ಪ್ರತಿ ಕೆಜಿಗೆ 15ರೂ.ನಂತೆ ವಿತರಿಸಲಾಗುವುದು. ಅಂತರ ರಾಜ್ಯ/ಅಂತರ-ಜಿಲ್ಲೆ ಪಡಿತರ ಚೀಟಿದಾರರು ಪೋರ್ಟೆಬಿಲಿಟಿಯಲ್ಲಿ ಆಹಾರಧಾನ್ಯ ಪಡೆಯಲು ಅವಕಾಶವಿದ್ದು, ಜಿಲ್ಲೆಯ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆಯಬಹುದಾಗಿದೆ.
Advertisement
ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಆಹಾರಧಾನ್ಯ ವಿತರಣೆ
05:40 PM May 07, 2020 | sudhir |
Advertisement
Udayavani is now on Telegram. Click here to join our channel and stay updated with the latest news.