Advertisement

ಜನಧನದಿಂದ ಬಡತನ ನೀಗಲು ಯತ್ನ: ಯೋಜನೆ ಆರು ವರ್ಷ ಪೂರೈಸಿದ್ದಕ್ಕೆ ಮೋದಿ ಹರ್ಷ

03:18 AM Aug 29, 2020 | Hari Prasad |

ಹೊಸದಿಲ್ಲಿ: ಕೇಂದ್ರ ಸರಕಾರ ಜಾರಿಗೊಳಿಸಿದ ‘ಜನ ಧನ’ ಯೋಜನೆ ಬಡತನ ನಿವಾರಣೆಯ ಪ್ರಯತ್ನ.

Advertisement

ಅದೊಂದು ದೂರಗಾಮಿ ಬದಲಾವಣೆ ತರುವಂಥದ್ದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಪ್ರಧಾನಿಯವರು ಘೋಷಣೆ ಮಾಡಿರುವ ಯೋಜನೆಗೆ ಆರು ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಶುಕ್ರವಾರ ಟ್ವೀಟ್‌ ಮಾಡಿದ್ದಾರೆ.

‘ಶುಕ್ರವಾರಕ್ಕೆ ಜನಧನ ಯೋಜನೆ ಜಾರಿಯಾಗಿ ಆರು ವರ್ಷಗಳು ಪೂರ್ತಿಯಾದವು.

ಬ್ಯಾಂಕಿಂಗ್‌ ವ್ಯವಸ್ಥೆ ಹೊಂದಿಲ್ಲದವರಿಗೆ ಅದನ್ನು ನೀಡುವ ಉದ್ದೇಶದಿಂದ ಯೋಜನೆ ಜಾರಿಗೊಳಿಸಲಾಗಿತ್ತು.
ಇದರಿಂದಾಗಿ ಧನ್ಮಾತ್ಮಕವಾದ ಬದಲಾಣೆಗಳು ಉಂಟಾಗಿವೆ. ಕೋಟ್ಯಂತರ ಮಂದಿಗೆ ಅನುಕೂಲವಾಗುವುದರ ಜತೆಗೆ ಬಡತನ ನಿರ್ಮೂಲನೆಯ ನಿಟ್ಟಿನಲ್ಲಿಯೂ ಉತ್ತಮ ಹೆಜ್ಜೆಯನ್ನಿಟ್ಟಂತಾಗಿದೆ’ ಎಂದು ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ.

Advertisement

17.90 ಕೋಟಿ ಖಾತೆ: 2015ರ ಆಗಸ್ಟ್‌ನಲ್ಲಿ ದೇಶಾದ್ಯಂತ 17.90 ಕೋಟಿ ಖಾತೆಗಳು ಇದ್ದವು. ಹಾಲಿ ತಿಂಗಳಲ್ಲಿ ಖಾತೆಗಳ ಜಂಖ್ಯೆ 40.35 ಕೋಟಿಗಳಿಗೆ ಏರಿದೆ ಎಂದು ಪ್ರಧಾನಿ ಹರ್ಷ ವ್ಯಕ್ತಪಡಿಸಿದ್ದಾರೆ.

‘ಪ್ರಧಾನಮಂತ್ರಿ ಜನ ಧನ ಯೋಜನೆಯಿಂದಾಗಿ ಹಲವು ಕುಟುಂಬಗಳ ಆರ್ಥಿಕ ಭವಿಷ್ಯ ಸುಭದ್ರವಾಗಿದೆ. ಶೇ.63ರಷ್ಟು ಜನ ಫ‌ಲಾನುಭವಿಗಳು ಗ್ರಾಮೀಣ ಪ್ರದೇಶದವರು. ಶೇ.55ರಷ್ಟು ಮಂದಿ ಮಹಿಳೆಯರೇ ಆಗಿದ್ದಾರೆ. ನಗರ ಪ್ರದೇಶಗಳಲ್ಲಿ ಶೇ.36.4ರಷ್ಟು ಮಂದಿ ಪ್ರಯೋಜನ ಪಡೆದುಕೊಂಡಿದ್ದಾರೆ” ಎಂದು ಪ್ರಧಾನಿಯವರು ಬರೆದುಕೊಂಡಿದ್ದಾರೆ.


ಪ್ರಯೋಜನವೇನು?
– ಮೈಕ್ರೋ ಪಿಂಚಣಿ, ವಿಮೆ

– 2 ಲಕ್ಷ ರೂ.ವರೆಗೆ ಅಪಘಾತ ವಿಮೆ

– ಡೆಬಿಟ್‌ ಕಾರ್ಡ್‌

– ಶೂನ್ಯ ಠೇವಣಿ ಇರುವ ಉಳಿತಾಯ ಖಾತೆ

Advertisement

Udayavani is now on Telegram. Click here to join our channel and stay updated with the latest news.

Next