Advertisement

ಪ್ರಧಾನ ಮಂತ್ರಿ ಉಜ್ವಲ ಯೋಜನೆ ಮತ್ತಷ್ಟು ವಿಸ್ತರಣೆ..?!

04:06 PM Mar 07, 2021 | Team Udayavani |

ನವ ದೆಹಲಿ : ಬಡತನ ರೇಖೆಗಿಂತ ಕೆಳಗಿರುವ ಕುಟುಂಬವನ್ನು ಗಮನದಲ್ಲಿಟ್ಟುಕೊಂಡು ಜಾರಿಗೆ ಬಂದ ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನು ಇನ್ನಷ್ಟು ವಿಸ್ತರಿಸಲು ಕೇಂದ್ರ ಸರ್ಕಾರ ಯೋಚಿಸುತ್ತಿದೆ.

Advertisement

ಕುಟುಂಬದ ಯೋಜನಾ ವೆಚ್ಚ ಕಡಿಮೆ ಮಾಡುವುದು, ಮಹಿಳೆಯರ ಆರೋಗ್ಯ ಸುಧಾರಣೆಗೆ ಒತ್ತು ನೀಡುವ ಉದ್ದೇಶದಿಂದ ಜಾರಿಗೆ ಬಂದ ಯಶಸ್ವಿ ಯೋಜನೆ ಪ್ರಧಾನ ಮಂತ್ರಿ ಉಜ್ವಲ ಯೋಜನೆ.

ಓದಿ : ಬಿಜೆಪಿ ಕುಟುಂಬ ಸೀಮಿತ ಪಕ್ಷವಲ್ಲ, ಅದು ಸರ್ವವ್ಯಾಪಿ: ಸಚಿವ ಅರವಿಂದ್ ಲಿಂಬಾವಳಿ

ಈ ಯೋಜನೆಯಡಿ ಕುಟುಂಬಗಳಿಗೆ ಉಚಿತವಾಗಿ ಎಲ್‌ ಪಿ ಜಿ ಸಂಪರ್ಕವನ್ನು ನೀಡಲಾಗುತ್ತದೆ. 2016ರಲ್ಲಿ ಈ ಪ್ರಧಾನ ಮಂತ್ರಿ ಉಜ್ವಲ  ಯೋಜನೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿದರು.

ಈ ಯೋಜನೆಯಡಿ ಎಲ್‌ ಪಿ ಜಿ ಸಂಪರ್ಕ ಸಿಗದ ಕುಟುಂಬವನ್ನು ಗುರುತಿಸಿ ಸಂಪರ್ಕ ನೀಡಲು ಪಿಎಂಯುವೈ-2(ಪ್ರಧಾನ ಮಂತ್ರಿ ಉಜ್ವಲ ಯೋಜನೆ) ಯೋಜನೆಯನ್ನು ಸರ್ಕಾರ ಘೋಷಣೆ ಮಾಡಿದೆ.

Advertisement

ಬಡತನದ ರೇಖೆಯಿಂದ ಕೆಳಗಿರುವ ಕುಟುಂಬಗಳಿಗೆ ಹಾಲಿ ಉಚಿತವಾಗಿ ಎಲ್‌ಪಿಜಿ ಸಿಲಿಂಡರ್ ಸಿಗುತ್ತಿದ್ದು, ಇದನ್ನು ಇನ್ನಷ್ಟು ವಿಸ್ತರಿಸಿ 3 ಸಿಲಿಂಡರ್ ನೀಡುವುದು ಹಾಗೂ 3 ತಿಂಗಳು ಅವಧಿ ವಿಸ್ತರಣೆ ಮಾಡಲು ಸರ್ಕಾರ ಮುಂದಾಗಿದೆ. ಇದರಿಂದ ಸುಮಾರು 83 ಮಿಲಿಯನ್ ಕುಟುಂಬಗಳಿಗೆ ಲಾಭವಾಗಲಿದೆ.

ಎಲ್‌ ಪಿ ಜಿ ಸಿಲಿಂಡರ್ ದರ ಏರಿಕೆ: 14.2 ಕೆಜಿ ಗೃಹಬಳಕೆಯ ಸಿಲಿಂಡರ್ ಬೆಲೆ ಜನವರಿಯಿಂದ 125 ರು ಹೆಚ್ಚಳ ಕಂಡಿದೆ. ಕಳೆದ ಮೇ ತಿಂಗಳಿಗೆ ಹೋಲಿಸಿದರೆ ದೆಹಲಿಯಲ್ಲಿ 237.50 ರು ಏರಿಕೆ ಕಂಡಿದೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಪ್ರತಿ ಬಡ ಕುಟುಂಬಕ್ಕೆ ಉಚಿತ ಎಲ್​ಪಿಜಿ ಸಂಪರ್ಕ ಒದಗಿಸುವ ಸರ್ಕಾರಿ ಸ್ವಾಮ್ಯದ ಇಂಧನ ವ್ಯಾಪಾರಿಗಳಿಗೆ ಸರ್ಕಾರವು ರೂ. 1,600 ಸಬ್ಸಿಡಿ ನೀಡಲಿದೆ. ಈ ಸಬ್ಸಿಡಿಯು ಸಿಲಿಂಡರ್‌ ಭದ್ರತೆ ಶುಲ್ಕ ಮತ್ತು ಇತರೆ ಶುಲ್ಕಗಳನ್ನು ಒಳಗೊಂಡಿರುತ್ತದೆ.

ಓದಿ : ಚಾರ್ಮಾಡಿ ಘಾಟ್ ನಲ್ಲಿ ಪಾದಚಾರಿಗಳಿಗೆ ಢಿಕ್ಕಿ ಹೊಡೆದ ಟಿಟಿ ವಾಹನ: ಇಬ್ಬರಿಗೆ ಗಂಭೀರ ಗಾಯ

Advertisement

Udayavani is now on Telegram. Click here to join our channel and stay updated with the latest news.

Next