ಹುಬ್ಬಳ್ಳಿ: ಕೋವಿಡ್ ಎರಡನೇ ಅಲೆ ಸಂಕಷ್ಟ ಸ್ಥಿತಿಯಲ್ಲಿ, ರಾಜ್ಯದಲ್ಲಿ ನ ಎಲ್ಲಾ ಖಾಸಗಿ ಆಸ್ಪತ್ರೆಗಳು ಕೋವಿಡ್ ರೋಗಿಗಳಿಗೆ, ಶುಲ್ಕದಲ್ಲಿ ಶೇಕಡಾ 50 ರಷ್ಟು ಕಡಿಮೆ ದರದಲ್ಲಿ ಚಿಕಿತ್ಸೆ ಮೂಲಕ ಸಾಮಾಜಿಕ ಹೊಣೆಗಾರಿಕೆ ತೋರಬೇಕೆಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು.
ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಎಂ.ಬಿ.ಪಾಟೀಲರು ವಿಜಯಪುರದ ಬಿಎಲ್ ಡಿ ಆಸ್ಪತ್ರೆಯಲ್ಲಿ ಕೊರೊನಾ ರೋಗಿಗಳಿಗೆ ಕಡಿಮೆ ಶುಲ್ಕದಲ್ಲಿ ಚಿಕಿತ್ಸೆ ಮಾಡುವುದಾಗಿ ಹೇಳುವ ಮೂಲಕ ಮಾದರಿಯಾಗಿದ್ದಾರೆ. ಇದೇ ರೀತಿ ಇತರೆ ಖಾಸಗಿ ಆಸ್ಪತ್ರೆಗಳು ಮುಂದಾಗುವ ಮೂಲಕ ಸಾಮಾಜಿಕ ಬದ್ದತೆ ತೋರಬೇಕೆಂದರು.
ಕರ್ನಾಟಕ ಸೇರಿದಂತೆ ದೇಶದ ಎಲ್ಲ ರಾಜ್ಯಗಳಿಗೆ ಕೊರೊನಾ ನಿಯಂತ್ರಣಕ್ಕೆ ಕೇಂದ್ರ ಸರಕಾರ ಅಗತ್ಯ ಸಹಕಾರ ನೀಡುತ್ತಿದೆ ಎಂದರು.
ಇದನ್ನೂ ಓದಿ:ದೇಶದಲ್ಲಿ ಜೀವವಾಯುವಿಗೆ ಹಾಹಾಕಾರ:ಆಕ್ಸಿಜನ್ ಕೊರತೆಯಿಂದ ಅಮೃತಸರದಲ್ಲಿ 6 ಜನ ದುರ್ಮರಣ
ರಾಜ್ಯಕ್ಕೆ ಹೆಚ್ಚಿನ ಪ್ರಮಾಣದ ಆಕ್ಸಿಜನ್ ನೀಡಲು ಕೇಂದ್ರ ಕ್ರಮ ಕೈಗೊಂಡಿದೆ. ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಪರಿಸ್ಥಿತಿ ಬಗ್ಗೆ ತಮ್ಮೊಂದಿಗೆ ಚರ್ಚಿಸಿದ್ದಾರೆ ಎಂದರು.
ವೈದ್ಯಕೀಯ ತಜ್ಞರ ಪ್ರಕಾರ ಕೋವಿಡ್ ಎರಡನೇ ಅಲೆ ಗಂಭೀರವಾಗಿ ದೆ ಎಂದಿದ್ದು, ಜನರು ಕಡ್ಡಾಯ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮುಂದಾಗಬೇಕು . ರೋಗದ ಬಗ್ಗೆ ಅನಗತ್ಯ ಭೀತಿ ಬಿಡಬೇಕೆಂದರು.