Advertisement

Hubballi: ಮೀಸಲಾತಿ ಕುರಿತು ರಾಹುಲ್ ಹೇಳಿಕೆಗೆ ತಿರುಗೇಟು ನೀಡಿದ ಪ್ರಹ್ಲಾದ್ ಜೋಶಿ

08:46 PM Sep 11, 2024 | Team Udayavani |

ಹುಬ್ಬಳ್ಳಿ: ಕೈಯಲ್ಲಿ ಸಂವಿಧಾನ ಹಿಡಿದುಕೊಂಡು ಓಡಾಡುವುದು, ಆದರೆ ಮನಸ್ಸಿನಲ್ಲಿ ವಿರೋಧ ಮನಸ್ಥಿತಿ ಹೊಂದಿರುವುದು ಈಗ ಹೊರ ಬಂದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮೀಸಲಾತಿ ಕುರಿತಾದ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿರುಗೇಟು ನೀಡಿದರು.

Advertisement

ಬುಧವಾರ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಇತಿಹಾಸವನ್ನು ನೋಡಿದರೆ ಎಂದಿಗೂ ಆವರು ಮೀಸಲಾತಿ ಹಾಗೂ ಸಾಮಾಜಿಕ ನ್ಯಾಯದ ವಿರೋಧಿಗಳು. ನೆಹರು, ಇಂದಿರಾ ಗಾಂಧಿ, ರಾಜೀವ ಗಾಂಧಿ ಅವರ ಭಾಷಣಗಳು ಹಾಗೂ ಲೋಕಸಭೆಯಲ್ಲಿ ಅಧಿಕೃತವಾಗಿ ಮಾತನಾಡಿರುವುದನ್ನು ನೋಡಿದರೆ ಇವರು ಮೀಸಲಾತಿ ವಿರೋಧಿಗಳು ಎಂಬುವುದು ಸ್ಪಷ್ಟವಾಗುತ್ತವೆ. ಸಂವಿಧಾನಾತ್ಮಕ ಮೀಸಲಾತಿ ಕಲ್ಪಿಸಿದ ಡಾ| ಬಿ.ಆರ್.ಅಂಬೇಡ್ಕರ್ ಅವರನ್ನು ಘೋರವಾಗಿ ಅವಮಾನ ಮಾಡಿದ್ದು ಇದೇ ಕಾಂಗ್ರೆಸ್. ೧೯೯೦ ರವರೆಗೆ ಇವರಿಗೆ ಭಾರತರತ್ನ ಪುರಸ್ಕಾರ ನೀಡಲಿಲ್ಲ. ಹಿಂದೆ ಚುನಾವಣೆಯಲ್ಲಿ ಸೋಲಿಸಿದರು ಎಂದರು.

ದಲಿತರಿಗೆ ಅನ್ಯಾಯ ಮಾಡುವ ಹಾಗೂ ಮೀಸಲಾತಿಗೆ ವಿರೋಧ ಮಾಡುವ ಪಕ್ಷವಿದು. ದಲಿತರು ಹಾಗೂ ಅಲ್ಪಸಂಖ್ಯಾತರನ್ನು ಓಟ್ ಬ್ಯಾಂಕ್ ರಾಜಕಾರಣಕ್ಕೆ ಬಳಸಿಕೊಂಡಿದ್ದಾರೆ. ೧೯೮೪ ರಲ್ಲಿ ಸಿಖ್‌ರ ಕೊರಳಿಗೆ ಟೈಯರ್ ಹಾಕಿ ಸುಟ್ಟವರು ಇದೀಗ ಅವರ ಪೇಟದ ಬಗ್ಗೆ ಮಾತನಾಡುತ್ತಾರೆ. ಅಧಿಕಾರಕ್ಕಾಗಿ ದೇಶದ ಭದ್ರತೆಗೆ ದಕ್ಕೆ ತರುವಂತೆ ಪಕ್ಷ ಹಾಗೂ ಪಕ್ಷದ ನಾಯಕರು ಕಾಂಗ್ರೆಸ್‌ನಲ್ಲಿದ್ದಾರೆ. ಈ ಹೇಳಿಕೆಯನ್ನು ತೀವ್ರವಾಗಿ ಖಂಡಿಸುತ್ತೇವೆ. ಅಪ್ರಬುದ್ಧ ಹೇಳಿಕೆಯನ್ನು ನಾವು ತಿರಸ್ಕಾರ ಮಾಡಿದ್ದೇವೆ ಎಂದರು.

ಇದನ್ನೂ ಓದಿ: Gadaga: ಸಿಎಂ ಸ್ಥಾನ ಖಾಲಿ ಇಲ್ಲ, ಖಾಲಿಯಾಗುವ ಪ್ರಶ್ನೆಯೂ ಇಲ್ಲ: ಸಚಿವ ಎಚ್‌.ಕೆ.ಪಾಟೀಲ

Advertisement

Udayavani is now on Telegram. Click here to join our channel and stay updated with the latest news.

Next