Advertisement

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

07:46 PM Apr 30, 2024 | Team Udayavani |

ಯಾದಗಿರಿ: ಲೋಕಸಭೆ ಚುನಾವಣೆ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಮತದಾರರನ್ನು ತಮ್ಮತ್ತ ಸೆಳೆಯುವ ಪೈಪೋಟಿಯಲ್ಲಿ ಕಾಂಗ್ರೆಸ್ ಪಕ್ಷ ಎಲ್ಲಿಲ್ಲದ ಕಸರತ್ತು ನಡೆಸುತ್ತಿದೆ. ಈಗಾಗಲೇ ಕರ್ನಾಟಕಾದ್ಯಂತ ಪ್ರಜಾಧ್ವನಿ-2 ಪ್ರಚಾರ ಸಭೆಯ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ ಅವರು ನಾಡಿನ ಜನರ ಗಮನ ಸೆಳೆಯುತ್ತಿದ್ದಾರೆ.

Advertisement

ನಾಳೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ನಡೆಯುವ ಬಹಿರಂಗ ಪ್ರಚಾರ ಸಭೆಯಲ್ಲಿ ಹಾಗೂ ಯಾದಗಿರಿ ನಗರದ ಹೊನಕೇರಿ ಲೆಔಟ್‌ನಲ್ಲಿ ನಡೆಯುವ ‘ಪ್ರಜಾಧ್ವನಿ-2’ ಬಹಿರಂಗ ಸಭೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಿಲ್ಲೆಯ ಜನರುದ್ದೇಶಿಸಿ ಮಾತನಾಡಲಿದ್ದಾರೆ.

ಸುರಪುರ ವಿಧಾನಸಭೆ ಉಪಚುನಾವಣೆ ನಿಮಿತ್ತವಾಗಿ ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯುವ ಬಹಿರಂಗ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯನವರು ಕಾಂಗ್ರೆಸ್ ಅಭ್ಯರ್ಥಿ ರಾಜಾ ವೇಣುಗೋಪಾಲ ನಾಯಕ ಪರವಾಗಿ ಮತಯಾಚಿಸಲಿದ್ದಾರೆ.

ನಗರದ ಮೈಲಾಪುರ ಅಗಸಿಯಿಂದ ತೆರೆದ ವಾಹನದಲ್ಲಿ ಬೃಹತ್ ರೋಡ್ ಶೋ ಮೂಲಕ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ ಅವರನ್ನು ಯಾದಗಿರಿ ಕಾಂಗ್ರೆಸ್ ಜಿಲ್ಲಾದ್ಯಕ್ಷ ಬಸರೆಡ್ಡಿ ಅನಪುರ ಹಾಗೂ ನಗರ ಶಾಸಕ ಚೆನ್ನಾರೆಡ್ಡಿ ಪಾಟೀಲ ತುನ್ನೂರ್ ಸ್ವಾಗತಿಸಲಿದ್ದಾರೆ.

ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಬಹಿರಂಗ ಸಭೆಯಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಜಿಲ್ಲಾ ಉಸ್ತವಾರಿ ಸಚಿವರಾದ ಶರಣಬಸಪ್ಪ ದರ್ಶಾನಪುರ, ರಾಯಚೂರು ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಕುಮಾರ ನಾಯಕ ಮತ್ತು ಕಾಂಗ್ರೆಸ್ ಪಕ್ಷದ ನಾಯಕರು, ಜಿಲ್ಲಾ ಕಾಂಗ್ರೆಸ್ ಪ್ರಮುಖರು ಸೇರಿದಂತೆ ಅನೇಕ ಮುಖಂಡರು ಭಾಗಿಯಾಗಲಿದ್ದಾರೆ.

Advertisement

ಸಿದ್ಧತೆ ಪರಿಶೀಲಿಸಿದ ಶಾಸಕ ತುನ್ನೂರ್

ನಗರದ ಹೊನ್ನಕೇರಿ ಲೆಔಟ್‌ನಲ್ಲಿ ನಡೆಯುವ ಕಾಂಗ್ರೆಸ್ ಪಕ್ಷದ ‘ಪ್ರಜಾಧ್ವನಿ-2’ ಸಮಾವೇಶದ ಸಿದ್ಧತೆಗಳನ್ನು ಯಾದಗಿರಿ ನಗರ ಶಾಸಕರಾದ ಚನ್ನಾರೆಡ್ಡಿ ಪಾಟೀಲ ತುನ್ನೂರ್ ಅವರು ಮಂಗಳವಾರ ಸಂಜೆ ವೀಕ್ಷಿಸಿ ಮಾತನಾಡಿದ ಅವರು, ಲೋಕಸಭೆ ಚುಣಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಜನರು ಒಲವು ತೋರುತ್ತಿದ್ದಾರೆ. ಬಡವರ ಹಾಗೂ ಕೂಲಿ ಕಾರ್ಮಿಕರ ಕಲ್ಯಾಣಕ್ಕೆ ಕಾಂಗ್ರೆಸ್ ದೇಶದಲ್ಲಿ ಅಧಿಕಾರಕ್ಕೆ ಬರಬೇಕು ಎಂದು ಹೇಳಿದರು.

ಯಾದಗಿರಿ ನಗರದಲ್ಲಿ ನಾಳೆ ನಡೆಯುವ ಬೃಹತ್ ಬಹಿರಂಗ ಸಭೆಯಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.

ಜಿಲ್ಲೆಯ ಸುತ್ತಲಿನ ಗ್ರಾಮಗಳಿಂದ ಸಾರ್ವಜನಿಕರು ಬರಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವ ನಿರೀಕ್ಷೆಯಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮರಿಯಪ್ಪ ಬಿಳ್ಹಾರ್, ಸುದರ್ಶನ ನಾಯಕ, ಸ್ಯಾಮ್ಸಂಗ್ ಮಾಳಿಕೇರಿ, ಮಲ್ಲಿಕಾರ್ಜುನ ಈಟೆ, ಬಸ್ಸುಗೌಡ ಬಿಳ್ಹಾರ, ಹಿರಿಯ ಮುಖಂಡರಾದ ಶಿವರಾಜ ಸಾಹುಕಾರ, ಪರಶುರಾಮ್ ಖಾನಾಪುರ್, ಶರಣಗೌಡ ಹಾಗೂ ಸನ್ನಿಗೌಡ ತುನ್ನೂರ್ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next