Advertisement

ಪ್ರಜ್ಞಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

08:12 AM Jan 28, 2023 | Team Udayavani |

ಉಡುಪಿ: ದೊಡ್ಡಣ್ಣಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ಆವರಣದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಜ್ಞಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ 74ನೇ ಗಣರಾಜ್ಯೋತ್ಸವ ಶಾಲಾ ಸಂಸ್ಥಾಪಕ ಶ್ರೀ ರಮಾನಂದ ಗುರೂಜಿಯವರ ಅಧ್ಯಕ್ಷತೆಯಲ್ಲಿಆಚರಿಸಲಾಯಿತು.

Advertisement

ಶಾಲೆಯಲ್ಲಿ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಯಾ ಪ್ರೊಫೆಸರ್  ಡಾಕ್ಟರ್ ರೀತು ಕೆಯೂರ್ ಧ್ವಜಾರೋಹಣ ನೆರವೇರಿಸಿದರು.

ಶಾಲಾ ಸಂಯೋಜಕಿ ಕುಸುಮ ನಾಗರಾಜ್, ಉದ್ಯಮಿ ಆನಂದ್ ಬಾಯಿರೀ ಕಾಷ್ಟ ಶಿಲ್ಪಿ ಜಗದೀಶ್ ಆಚಾರ್ಯ ಮುಖ್ಯ ಅತಿಥಿಗಳಾಗಿದ್ದರು.

ಶಾಲಾ ಆವರಣದಲ್ಲಿ ನೆರವೇರಿದ ಸಭಾ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲೆ ಉಷಾ ರಮಾನಂದ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿ ದೀಪಾ ಸ್ವಾಗತಿಸಿ, ಪರಿಚಯಿಸಿದರು. ತೀರ್ಥಕಲಾ ವಂದಿಸಿದರು.

ಶಾಲಾ ಪರಿವೀಕ್ಷಕಿ ಸ್ವಾತಿ ಆಚಾರ್ಯ ಕಾರ್ಯಕ್ರಮ ಆಯೋಜಿಸಿದ್ದರು. ಶಿಕ್ಷಕ ರಾಘವೇಂದ್ರ ಯು, ಶಿಕ್ಷಕಿಯರಾದ ಪೂರ್ಣಿಮಾ, ಸುಚಿತ್ರ, ಅಂಜಲಿ, ಸಹಾಯಕಿ ಕಲಾವತಿ ಆಚಾರ್ಯ, ಪೋಷಕರು, ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Advertisement

ಶಾಲಾ ವಿದ್ಯಾರ್ಥಿ ನಾಯಕಿ ಕುಮಾರಿ ನಿಧಿ ನಾಯ್ಕ್ ಕಾರ್ಯಕ್ರಮ ನಿರೂಪಿಸಿದರು.

ಸಭಾ ಕಾರ್ಯಕ್ರಮದ ನಂತರ ಮಕ್ಕಳಿಂದ ವಿವಿಧ ಮನೋರಂಜನಾ ಕಾರ್ಯಕ್ರಮಗಳು ಜರುಗಿದವು.

Advertisement

Udayavani is now on Telegram. Click here to join our channel and stay updated with the latest news.

Next