Advertisement
ಎಸ್‌ಐಟಿ ಜತೆ ಎಫ್ಎಸ್‌ಎಲ್ ತಂಡವೂ ಇತ್ತು. ಪ್ರಜ್ವಲ್ ರೇವಣ್ಣ ಅವರು ಸಂಸದರಾಗಿದ್ದಾಗ ಇದೇ ಸರಕಾರಿ ವಸತಿ ಗೃಹದಲ್ಲಿ ಅತ್ಯಾಚಾರ ನಡೆಸಿದ್ದರು ಎಂದು ಮಹಿಳೆಯೊಬ್ಬರು ದೂರು ನೀಡಿರುವುದರಿಂದ ಸಂತ್ರಸ್ತೆಯ ಸಮಕ್ಷಮದಲ್ಲಿ ಕಳೆದ ಮೇ 4ರಂದು ಸ್ಥಳ ಮಹಜರು ನಡೆಸಲಾಗಿತ್ತು. ಇದೇ ಪ್ರಕರಣದಲ್ಲಿ ಈಗ ನ್ಯಾಯಾಂಗ ಬಂಧನದಲ್ಲಿರುವ ಪ್ರಜ್ವಲ್‌ರನ್ನು ಬಾಡಿ ವಾರೆಂಟ್ ಪಡೆದು ಮಹಜರ್‌ಗೆ ಕರೆತಲಾಗಿತ್ತು.
ಅರ್ಜಿ ವಿಚಾರಣೆ ಮುಂದಿನ ವಾರಕ್ಕೆ
ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಅಪಹರಿಸಿದ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣಗೆ ನೀಡಿರುವ ಜಾಮೀನು ರದ್ದುಪಡಿಸುವಂತೆ ಕೋರಿ ರಾಜ್ಯ ಸರಕಾರ ಸಲ್ಲಿಸಿರುವ ಅರ್ಜಿಗೆ ರೇವಣ್ಣ ಅವರು ಸಲ್ಲಿಸಿರುವ ಆಕ್ಷೇಪಣೆಯನ್ನು ಸಂಪೂರ್ಣವಾಗಿ ಪರಿಶೀಲಿಸಬೇಕು ಎಂದು ರಾಜ್ಯ ಸರಕಾರ ಹೇಳಿದ ಹಿನ್ನೆಲೆಯಲ್ಲಿ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ. ಜೂನ್ 28ಕ್ಕೆ ಅರ್ಜಿ ವಿಚಾರಣೆ ನಡೆಯಲಿದೆ.