Advertisement

‘ಮಾಫಿಯಾ’ದಲ್ಲಿ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್

12:43 PM Jul 04, 2021 | Team Udayavani |

ಬೆಂಗಳೂರು : ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅವರ 35ನೇ ಚಿತ್ರಕ್ಕೆ ಗುರುದತ್ ಗಾಣಿಗಾ ಅವರು ನಿರ್ದೇಶನ ಮಾಡಲಿದ್ದಾರೆ ಎನ್ನುವ ಸುದ್ದಿ ಕೆಲ ದಿನಗಳ ಹಿಂದೆಯಷ್ಟೆ ಕೇಳಿ ಬಂದಿತ್ತು. ಇದೀಗ ಆ ಚಿತ್ರದ ಟೈಟಲ್ ಹಾಗೂ ನ್ಯೂ ಲುಕ್ ರಿಲೀಸ್ ಆಗಿದೆ.

Advertisement

ಪ್ರಜ್ವಲ್ ದೇವರಾಜ್ ಅವರ ಹುಟ್ಟುಹಬ್ಬದ ನಿಮಿತ್ತ ಹೊಸ ಸಿನಿಮಾದ ಶೀರ್ಷಿಕೆ ಮತ್ತು ಫಸ್ಟ್​ಲುಕ್​ ಪೋಸ್ಟರ್​ ಬಿಡುಗಡೆ ಆಗಿದೆ. ಈ ಚಿತ್ರಕ್ಕೆ ‘ಮಾಫಿಯಾ’ ಎಂದು ಶೀರ್ಷಿಕೆ ಇಡಲಾಗಿದೆ. ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ. ಅವರು ನಿರ್ಮಿಸುತ್ತಿರುವ ಈ‌ ಚಿತ್ರದ ಚಿತ್ರೀಕರಣ ಆಗಸ್ಟ್‌ನಲ್ಲಿ ಆರಂಭವಾಗಲಿದೆ. ಪ್ರಜ್ವಲ್ ಅವರಿಗೆ ನಾಯಕಿಯಾಗಿ ಅದಿತಿ ಪ್ರಭುದೇವ ನಟಿಸುತ್ತಿದ್ದಾರೆ. ಅನೂಪ್ ಸೀಳಿನ್ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಮಾಸ್ತಿ ಸಂಭಾಷಣೆ ಬರೆಯಲಿದ್ದಾರೆ.

ರೆಬೆಲ್ ಸ್ಟಾರ್ ಅಂಬರೀಶ್ ಅವರು ನಟಿಸಿದ ಕೊನೆಯ ಸಿನಿಮಾ ಅಂಬಿ ನಿಂಗ್ ವಯಸ್ಸಾಯ್ತೋ ಚಿತ್ರಕ್ಕೆ ಗುರುದತ್ ಗಾಣಿಗ ಆಕ್ಷನ್ ಕಟ್ ಹೇಳಿದ್ದರು. ಈ ಸಿನಿಮಾದಲ್ಲಿ ಕಿಚ್ಚ ಸುದೀಪ್​, ಶ್ರುತಿ ಹರಿಹರನ್​, ಸುಹಾಸಿನಿ ನಟಿಸಿದ್ದರು. ಈಗ ಅವರು ‘ಮಾಫಿಯಾ’ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳಲು ಸಜ್ಜಾಗಿದ್ದು, ಪೋಸ್ಟರ್​ ಮೂಲಕ ನಿರೀಕ್ಷೆ ಮೂಡಿಸಿದ್ದಾರೆ.

ಇನ್ನು ‘ಮಾಫಿಯಾ’ ಚಿತ್ರದ ಮೋಷನ್​ ಪೋಸ್ಟರ್​ ನ್ನು ತಮಿಳು ನಟ ವಿಜಯ್​ ಸೇತುಪತಿ, ಆರ್ಯ ಮುಂತಾದ ನಟರು ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡು ಶುಭಕೋರಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next