Advertisement

Prajwal devaraj; ಮನುಷ್ಯ-ಪ್ರಾಣಿ ಸಂಘರ್ಷದ ಸುತ್ತ ‘ಕರಾವಳಿ’

03:39 PM Dec 17, 2023 | Team Udayavani |

ಪ್ರಜ್ವಲ್‌ ದೇವರಾಜ್‌ ನಟನೆಯ ಹೊಸ ಚಿತ್ರ “ಕರಾವಳಿ’ಯ ಟೀಸರ್‌ ಇತ್ತೀಚೆಗೆ ರಿಲೀಸ್‌ ಆಗಿ ಮೆಚ್ಚುಗೆ ಪಡೆಯುತ್ತಿದೆ. ಈ ಚಿತ್ರಕ್ಕೆ ಗುರುದತ್‌ ಗಾಣಿಗ ಆಕ್ಷನ್‌ ಕಟ್‌ ಹೇಳುತ್ತಿದ್ದಾರೆ.

Advertisement

ಈಗಾಗಲೇ “ಅಂಬಿ ನಿಂಗೆ ವಯಸ್ಸಾಯೊ¤à’ ಸಿನಿಮಾಗೆ ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದ ಗುರುದತ್‌ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ 2ನೇ ಸಿನಿಮಾ ಇದಾಗಿದೆ.

ಸದ್ಯ ರಿಲೀಸ್‌ ಆಗಿರುವ ಟೀಸರ್‌ನಲ್ಲಿ ಜಗತ್ತಿಗೆ ಎಂಟ್ರಿ ಕೊಡುವ ಎರಡು ಹೊಸ ಜೀವಗಳನ್ನು ನೋಡಬಹುದು. ತಾಯಿ ಮಗುವಿಗೆ ಜನ್ಮ ನೀಡುತ್ತಿರುವ ದೃಶ್ಯದ ಜೊತೆಯೇ ಎಮ್ಮೆ ತನ್ನ ಮಗುವಿಗೆ ಜನ್ಮ ನೀಡುತ್ತಿದೆ. ಇದು ಮನುಷ್ಯ ಮತ್ತು ಪ್ರಾಣಿ ನಡುವಿನ ಸಂಘರ್ಷದ ಬಗ್ಗೆ ಇರುವ ಸಿನಿಮಾ ಎನ್ನುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ.

ಕರಾವಳಿ ಎಂದಮೇಲೆ ಆ ಭಾಗದ ಸಂಸ್ಕೃತಿ, ದೈವ, ಯಕ್ಷಗಾನ ಮುಖ್ಯವಾಗಿ ಕಂಬಳ ಸೇರಿದಂತೆ ಅಲ್ಲಿನ ಆಚಾರ ವಿಚಾರ ಎಲ್ಲವನ್ನು ಈ ಸಿನಿಮಾದಲ್ಲಿ ಕಟ್ಟಿಕೊಡಲಿದೆ ಚಿತ್ರತಂಡ. ಇನ್ನು ಕರಾವಳಿ ಚಿತ್ರಕ್ಕೆ ಸಚಿನ್‌ ಬಸ್ರೂರು ಸಂಗೀತ ಸಂಯೋಜನೆ ಮಾಡಿದ್ದಾರೆ. ಅಭಿಮನ್ಯು ಸದಾನಂದನ್‌ ಅವರ ಛಾಯಾಗ್ರಹಣ ಚಿತ್ರಕ್ಕಿದೆ. ಮಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಯಲಿದ್ದಾರೆ

Advertisement

Udayavani is now on Telegram. Click here to join our channel and stay updated with the latest news.

Next