Advertisement

Kannada Cinema: ‘ಮಾಫಿಯಾ’ದಲ್ಲಿ ಪ್ರಜ್ವಲ್ ಮಿಂಚು; ಟೀಸರ್ ಗೆ ಮೆಚ್ಚುಗೆ

02:27 PM Dec 05, 2023 | Team Udayavani |

ನಟ ಪ್ರಜ್ವಲ್‌ ದೇವರಾಜ್‌ ನಾಯಕನಾಗಿ ಅಭಿನಯಿಸುತ್ತಿರುವ “ಮಾಫಿಯಾ’ ಸಿನಿಮಾದ ಚಿತ್ರೀಕರಣ ಮುಕ್ತಾಯವಾಗಿದ್ದು, ಬಿಡುಗಡೆ ಹಂತಕ್ಕೆ ಬಂದಿದೆ. ಮೊದಲ ಹಂತವಾಗಿ ಚಿತ್ರದ ಟೀಸರ್‌ ಬಿಡುಗಡೆಯಾಗಿದೆ. ಬೆಂಗಳೂರು ಕುಮಾರ್‌ ಫಿಲಂಸ್‌ನ ಡಿ ಕುಮಾರ್‌ ಬಿ ನಿರ್ಮಿಸಿರುವ ಈ ಚಿತ್ರವನ್ನು ಲೋಹಿತ್‌ ನಿರ್ದೇಶನ ಮಾಡಿದ್ದಾರೆ.

Advertisement

ಟೀಸರ್‌ ಬಿಡುಗಡೆ ವೇಳೆ ಮಾತನಾಡಿದ ಲೋಹಿತ್‌ “ಈವರೆಗೂ ಯಾರು ತೋರಿಸಿರದ ಮಾಫಿಯಾ ಈ ಚಿತ್ರದಲ್ಲಿ ತೋರಿಸಿದ್ದೇವೆ. ಬೇರೆ ಬೇರೆ ಮಾರ್ಕೆಟ್‌ ಹೆಸರು ಕೇಳಿರುತ್ತೀರಾ. ಆದರೆ ಇದೆ ಮೊದಲ ಬಾರಿಗೆ ರೆಡ್‌ ಮಾರ್ಕೆಟ್‌ ಪರಿಚಯಿಸಲಾಗಿದೆ. ಅದು ಏನೆಂಬುದನ್ನು ಚಿತ್ರದಲ್ಲೇ ನೋಡಬೇಕು’ ಎಂದರು.

“ಪ್ರಜ್ವಲ್‌ ದೇವರಾಜ್‌ ಅಭಿನಯದ 35 ನೇ ಚಿತ್ರವನ್ನು ನಿರ್ಮಿಸುತ್ತಿರುವುದು ಖುಷಿಯಾಗಿದೆ. ನಿರ್ದೇಶಕ ಲೋಹಿತ್‌ ಸೇರಿದಂತೆ ಚಿತ್ರತಂಡದ ಸಹಕಾರದಿಂದ ಮಾಫಿಯಾ ಚಿತ್ರ ಚೆನ್ನಾಗಿ ಮೂಡಿಬಂದಿದೆ. ಜನವರಿಯಲ್ಲಿ ಚಿತ್ರವನ್ನು ಬಿಡುಗಡೆ ಮಾಡುವ ಯೋಜನೆಯಿದೆ’ ಎಂದರು.

ನಿರ್ಮಾಪಕ ಕುಮಾರ್‌ ಬಿ. ಪ್ರಜ್ವಲ್‌ ಅವರಿಗೂ ಈ ಚಿತ್ರದ ಮೇಲೆ ನಿರೀಕ್ಷೆ ಇದೆ. “ಮಾಫಿಯಾ ಚಿತ್ರದ ಬಗ್ಗೆ ಹೇಳಬೇಕಾದರೆ, ಕುಮಾರ್‌ ಅವರು ಒಳ್ಳೆಯ ಚಿತ್ರ ನಿರ್ಮಾಣ ಮಾಡಿದ್ದಾರೆ. ನಿರ್ದೇಶಕ ಲೋಹಿತ್‌ ಅವರ ವಯಸ್ಸು ಚಿಕ್ಕದಾಗಿದ್ದರೂ ಕೆಲಸದಲ್ಲಿ ಅಸಾಧಾರಣ. ನಾನು, ಈವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ’ ಎಂದರು ನಾಯಕ ಪ್ರಜ್ವಲ್‌ ದೇವರಾಜ್.

ಪಟಪಟ ಎಂದು ಮಾತನಾಡುವ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಂಡಿರುವುದಾಗಿ ನಾಯಕಿ ಅದಿತಿ ಪ್ರಭುದೇವ ಹೇಳಿದರು. ನಟ ಶೈನ್‌ ಶೆಟ್ಟಿ, ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್‌, ಸಂಗೀತ ನಿರ್ದೇಶಕ ಅನೂಪ್‌ ಸೀಳಿನ್‌ ಮಾಫಿಯಾ ಚಿತ್ರದ ಬಗ್ಗೆ ಮಾತನಾಡಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next