Advertisement
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬೇರೆಯವರಿಂದ ಮಾತನಾಡಿಸುವ, ಪ್ರತಿಭಟನೆ ಮಾಡಿಸುವ, ಬೇರೆಯವರ ಮೇಲೆ ಅನಗತ್ಯ ಆರೋಪ ಮಾಡುವ ಅಗತ್ಯ ನನಗಿಲ್ಲ. ನಾನು ಚುನಾವಣಾ ಪ್ರಚಾರದಲ್ಲಿ ನಿರತನಾಗಿದ್ದೇನೆ. ನಾನು ರಾಜಕೀಯ ಪಕ್ಷದ ಅಧ್ಯಕ್ಷ. ಈ ಪ್ರಕರಣದಲ್ಲಿ ಒಂದು ಸಣ್ಣ ಹಸ್ತಕ್ಷೇಪವಿದ್ದರೂ ಅದಕ್ಕೆ ಬೆಲೆ ತೆರಲು ನಾನು ಸಿದ್ಧ. ಈಗ ಆ ವಿಚಾರವಾಗಿ ನಾನು ಮಾತನಾಡುವುದಿಲ್ಲ. ಸಮಯ ಎಲ್ಲದಕ್ಕೂ ಉತ್ತರ ನೀಡಲಿದೆ ಎಂದು ಸೂಚ್ಯವಾಗಿ ಹೇಳಿದರು.
ದೇವೇಗೌಡರ ಕುಟುಂಬಕ್ಕೆ ಕಳಂಕ ತರಲು ರೇವಣ್ಣ ಅವರನ್ನು ಬಂಧಿಸಲಾಗಿದೆ ಎಂಬ ಆರೋಪದ ಬಗ್ಗೆ ಕೇಳಿದಾಗ, ರೇವಣ್ಣ ಪರಿಸ್ಥಿತಿ ನೋಡಿ ನನಗೂ ಬೇಸರವಾಗುತ್ತಿದೆ. ಅವರದು ದೊಡ್ಡ ಕುಟುಂಬ, ಈ ರೀತಿ ಆಗಬಾರದು ಎಂದು ಬಯಸುತ್ತೇನೆ. ಅವರು ನನಗೆ ಏನಾದರೂ ಬಯಸಲಿ. ನಾನೂ ರಾಜಕೀಯ ಷಡ್ಯಂತ್ರಕ್ಕೆ ಗುರಿ ಆಗಿದ್ದವನೇ ಮತ್ತು ಅದರ ನೋವು ಅನುಭವಿಸಿದವನೇ ಆಗಿದ್ದೇನೆ. ಆದರೆ ನನ್ನ ಬ್ರದರ್ ಕುಮಾರಣ್ಣನಿಗೆ ವಿಧಾನಸಭೆಯಲ್ಲಿ ಉತ್ತರ ನೀಡುತ್ತೇನೆ ಎಂದು ತೀಕ್ಷ್ಣವಾಗಿ ತಿರುಗೇಟು ನೀಡಿದರು.