Advertisement

Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ

12:50 PM May 08, 2024 | Team Udayavani |

ರಾಮನಗರ: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿ ರಾಮನಗರದಲ್ಲಿ ಬುಧವಾರ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲಾಗಿದೆ.

Advertisement

ರಾಮನಗರದ ಐಜೂರು ವೃತ್ತದಲ್ಲಿ ಮಾಜಿ ಶಾಸಕ ಎ. ಮಂಜುನಾಥ್ ನೇತೃತ್ವದಲ್ಲಿ ಜೆಡಿಎಸ್-ಬಿಜೆಪಿ ಕಾರ್ಯಕರ್ತರು ಜಂಟಿಯಾಗಿ ಪ್ರತಿಭಟನೆ ನಡೆಸಿ ಬೆಂಗಳೂರು-ಮೈಸೂರು ಹಳೇ ಹೆದ್ದಾರಿ ತಡೆದು ಆಕ್ರೋಶ ಹೊರ ಹಾಕಿದ್ದಾರೆ. ಡಿ.ಕೆ.ಶಿವಕುಮಾರ್ ಅವರ ಭಾವಚಿತ್ರಕ್ಕೆ ಸಿಡಿ ಹಾರ ಹಾಕಿ, ಚಪ್ಪಲಿಯಿಂದ ಹೊಡೆದು ಪ್ರತಿಭಟನಾಕಾರರು ಕಿಡಿಕಾರಿದ್ದಾರೆ.

ಡಿಕೆ ಶಿವಕುಮಾರ್ ಅವರು ರಾಜಿನಾಮೆ ನೀಡಬೇಕೆಂದು ಒತ್ತಾಯ ಮಾಡಿ ಘೋಷಣೆಗಳನ್ನು ಕೂಗಿದ್ದಾರೆ. ನೂರಾರು ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next