Advertisement

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

03:34 PM May 01, 2024 | Team Udayavani |

ಬೀದರ್‌: ಹಾಸನದ ಸಂಸದ ಪ್ರಜ್ವಲ್‌ ರೇವಣ್ಣ ಘಟನೆಗೆ ಖಂಡನೆ ವ್ಯಕ್ತಪಡಿಸಿ ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು ಎಂದು ಹೇಳಿದರು.

Advertisement

ಬೀದರ್‌ ನಲ್ಲಿ‌ ಕಾಂಗ್ರೆಸ್ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಪುಷ್ಪಾ ಅಮರನಾಥ ಮತ್ತು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಂಜುಳಾ ನಾಯ್ಡು ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

ನಿರ್ಭಯಾ ಪ್ರಕರಣ ಮಾದರಿಯಲ್ಲಿ ಪ್ರಜ್ವಲ್ ಗೆ ಗಲ್ಲು ಶಿಕ್ಷೆ ಆಗಬೇಕು. ಪ್ರಕರಣದ ನೈತಿಕ ಹೊಣೆ ಹೊತ್ತು ಕುಮಾರಸ್ವಾಮಿ‌ ರಾಜೀನಾಮೆ ನೀಡಬೇಕು ಮತ್ತು ಪ್ರಧಾನಿ ಮೋದಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

ಪ್ರಜ್ವಲ್ ಘಟನೆಯನ್ನು ಎನ್ ಡಿಎ ನಾಯಕರು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ‌. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮಂಗಲಸೂತ್ರ ಕಸಿದುಕೊಳ್ಳುತ್ತಾರೆ ಎಂದು ಹೇಳುವ ಪ್ರಧಾನಿಯ‌ ಎನ್ ಡಿಎ ಮೈತ್ರಿ ಅಭ್ಯರ್ಥಿ ಸಾವಿರಾರು ಜನರ‌ ತಾಳಿಯನ್ನು ಕಿತ್ತುಕೊಳ್ಳುವ ಹೇಯ ಕೃತ್ಯ ನಡೆಸಿದ್ದಾರೆ. ಈ ಬಗ್ಗೆ ಪ್ರಧಾನಿ ಮತ್ತು ಬಿಜೆಪಿ ನಾಯಕರು ಚಕಾರ ಯಾಕೆ ಎತ್ತಿಲ್ಲ ಎಂದು ಪ್ರಶ್ನಿಸಿದರು.

ಪ್ರಜ್ವಲ್ ದೇಶ ಬಿಟ್ಟು ಹೋಗಿರುವುದರ ಹಿಂದೆ ಯಾರಿದ್ದಾರೆ, ಅದರ ತನಿಖೆಯೂ ಆಗಬೇಕು ಎಂದು ಒತ್ತಾಯಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next