Advertisement
ಕಳೆದ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಜೆಡಿಎಸ್‌ನ ಉಚ್ಚಾಟಿತ ಸಂಸದ ಪ್ರಜ್ವಲ್ ರೇವಣ್ಣ ಅವರು 400 ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಎಸಗಿ, ಅವರ ವಿಡಿಯೋಗಳನ್ನು ಮಾಡಿಕೊಂಡಿದ್ದಾರೆ ಎಂದು ಸಾರ್ವಜನಿಕವಾಗಿ ಸುಳ್ಳು ಹರಡಿದ ಆರೋಪದ ಮೇಲೆ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಕ್ರಮಕೈಗೊಳ್ಳಲು ನಿರ್ದೇಶಿಸಬೇಕು ಎಂದು ಕೋರಿ ಆಲ್ ಇಂಡಿಯಾ ದಲಿತ ಆಕ್ಷನ್ ಕಮಿಟಿಯು ರಾಷ್ಟ್ರೀಯ ಅಧ್ಯಕ್ಷ ಚಿ ನಾ ರಾಮು ಮತ್ತು ರಾಷ್ಟ್ರೀಯ ಮಹಿಳಾ ಘಟಕದ ಅಧ್ಯಕ್ಷೆ ಸುಶೀಲಾ ದೇವರಾಜ್ ಅವರಿಂದ ಜಿ ಆರ್ ಲಾ ಫರ್ಮ್ ಮೂಲಕ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು.
Related Articles
Advertisement
“ರಾಹುಲ್ ಗಾಂಧಿ ಅವರು ಇಂತಹ ಉಡಾಫೆ ಹೇಳಿಕೆಗಳನ್ನು ನೀಡಿದ್ದಾರೆ. ಈ ಹಿಂದೆ ಮೋದಿ ಉಪನಾಮ ಹೊಂದಿದವರು ಕಳ್ಳರು ಎಂದಿದ್ದರು. ಇದರಿಂದ ಅವರ ಲೋಕಸಭಾ ಸದಸ್ಯತ್ವ ರದ್ದುಗೊಳಿಸಲಾಗಿತ್ತು. ಇದಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿತ್ತು. ರಾಹುಲ್ ಅವರ ಪೌರತ್ವ ಪ್ರಶ್ನಿಸಿ ದೆಹಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ” ಎಂದು ಅವರು ಪೀಠದ ಗಮನಸೆಳೆದರು.
ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ವಕೀಲೆ ನಿಲೋಫರ್ ಅಕ್ಬರ್ ಅವರು “ದುರುದ್ದೇಶದಿಂದ ಅರ್ಜಿ ಸಲ್ಲಿಸಲಾಗಿದೆ” ಎಂದು ಆಕ್ಷೇಪಿಸಿದರು.
ವಾದ-ಪ್ರತಿವಾದ ಆಲಿಸಿದ ಪೀಠವು ಅರ್ಜಿಯಲ್ಲಿ ಯಾವುದೇ ಸಾರ್ವಜನಿಕ ಹಿತಾಸಕ್ತಿ ಇಲ್ಲ ಎಂದು ದಂಡ ವಿಧಿಸಿ ಅರ್ಜಿ ವಜಾ ಮಾಡಿದೆ.