Advertisement

Prajwal Revanna Case; ಸಿಬಿಐಗೆ ವಹಿಸಿದರೆ ಸರಕಾರದಲ್ಲಿ ಇರುವವರು ಜೈಲಿಗೆ

11:57 PM May 19, 2024 | Team Udayavani |

ಬೆಂಗಳೂರು: ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದರೆ ಸರಕಾರದಲ್ಲಿ ಇರುವವರೇ ಕಂಬಿ ಎಣಿಸಬೇಕಾಗುತ್ತದೆ. ಅದಕ್ಕಾಗಿಯೇ ಸರಕಾರ ಈ ಪ್ರಕರಣವನ್ನು ಸಿಬಿಐಗೆ ವಹಿಸುತ್ತಿಲ್ಲ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಹೇಳಿದರು.

Advertisement

ರವಿವಾರ ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರನ್ನು ಭೇಟಿ ಮಾಡಿ ಜನ್ಮದಿನದ ಶುಭಾಶಯ ಕೋರಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡರಿಗೆ ಜನ್ಮದಿನದ ಶುಭಾಶಯ ತಿಳಿಸಿದ್ದೇನೆ. ಇದೇ ವೇಳೆ ರಾಜ್ಯ ರಾಜಕೀಯದ ಕುರಿತಾಗಿ ಕೆಲವು ಮಾತನಾಡಿದ್ದಾರೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದು ಒಂದು ವರ್ಷವಾದರೂ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲವೆಂದು ಬೇಸರ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.

ಪ್ರಕರಣ ಮುಚ್ಚಿ ಹಾಕಲು ಯತ್ನ
ಡಾ| ಜಿ. ಪರಮೇಶ್ವರ್‌ ಅವರ ಕೈಯಲ್ಲಿರುವ ಗೃಹ ಇಲಾಖೆಯನ್ನು ಯಾರೋ “ಹೈಜಾಕ್‌’ ಮಾಡಿದ್ದಾರೆ. ಅಶ್ಲೀಲ ವೀಡಿಯೋ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣನನ್ನು ಬಂಧಿಸುವುದಕ್ಕೆ ಯಾರೂ ಅಡ್ಡಿಪಡಿಸುತ್ತಿಲ್ಲ. ಆದರೆ ವೀಡಿಯೋ ಹಂಚಿದವರ ವಿರುದ್ಧವೂ ಕ್ರಮ ಕೈಗೊಳ್ಳಲಿ. ಈ ವಿಚಾರದಲ್ಲಿ ಕಾಂಗ್ರೆಸ್‌ ಕಣ್ಣಾಮುಚ್ಚಾಲೆ ಆಟವಾಡುತ್ತಿದೆ. ಪ್ರಕರಣವನ್ನು ಮುಚ್ಚಿ ಹಾಕಲು ಎಸ್‌ಐಟಿ ಸಿದ್ಧತೆ ಮಾಡುತ್ತಿದೆ ಎಂದು ದೂರಿದರು.

ಒಕ್ಕಲಿಗ ನಾಯಕರನ್ನು ಮುಗಿಸಲು ಯೋಜನೆ
ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುಜೇìವಾಲ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ ಸೇರಿ ಮಾಸ್ಟರ್‌ ಪ್ಲ್ಯಾನ್ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಈಗಾಗಲೇ ದಲಿತ ನಾಯಕರನ್ನು ಮುಗಿಸಿದ್ದಾರೆ. ಇದೇ ರೀತಿ ಒಕ್ಕಲಿಗರನ್ನು ಮುಗಿಸಲು ಯೋಜನೆ ರೂಪಿಸಿದ್ದಾರೆ. ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ ವಹಿಸಬೇಕಿದೆ. ಮಾಜಿ ಸಚಿವ ರೇವಣ್ಣ ಅವರನ್ನು ಬಂಧಿ ಸಿದಂತೆ ಪ್ರಜ್ವಲ್‌ನ ಮಾಜಿ ಚಾಲಕನನ್ನು ಬಂಧಿ ಸಿಲ್ಲ. ಪೊಲೀಸರು ಕಾಂಗ್ರೆಸ್‌ ನಾಯಕರು ಹೇಳಿದಂತೆ ಕೇಳುತ್ತಾರೆ ಎಂದು ಅಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರೌಡಿಗಳಿಗೆ ಹಬ್ಬ
ರಾಜ್ಯದಲ್ಲಿ ಕೊಲೆ, ಕಳ್ಳತನ, ದರೋಡೆ ಹೆಚ್ಚಾಗಿದೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರೌಡಿಗಳು ಹಾಗೂ ಕೊಲೆಗಡುಕರಿಗೆ ಹಬ್ಬ. ಈ ಹಬ್ಬಕ್ಕೆ ಕಾಂಗ್ರೆಸ್ಸೇ ನೇರ ಕಾರಣ. ಇತ್ತೀ ಚೆಗೆ ಹತ್ಯೆಯಾದ ಅಂಜಲಿ ಕುಟುಂ ಬದವರು ಕೊಲೆಗಾರರನ್ನು ಗಲ್ಲಿಗೇರಿ ಸಬೇಕು ಎಂದು ಹೇಳಿದ್ದಾರೆ.

Advertisement

ದಾಖಲೆ ಬಿಡುಗಡೆ ಭಯದಲ್ಲಿ ದೇವರಾಜೇಗೌಡ ಬಂಧನ
ಬಿಜೆಪಿ ಮುಖಂಡ ದೇವರಾಜೇ ಗೌಡರು ಹೇಳಿಕೆ ನೀಡಿ, ಡಿ.ಕೆ.ಶಿವಕುಮಾರ್‌ ಅವರ ಧ್ವನಿಮುದ್ರಣ ಬಿಡುಗಡೆ ಮಾಡಿದ್ದಾರೆ. ಅದಕ್ಕಾ ಗಿಯೇ ಅವರ ಬಂಧನವಾಗಿದೆ ಎಂದು ಆರೋಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next