Advertisement

Prajwal Revanna Case ಮೇ 1ರ ಪತ್ರ ಎಲ್ಲಿ ಹೋಯ್ತು? ಕೇಂದ್ರಕ್ಕೆ ಗೃಹ ಸಚಿವರ ಪ್ರಶ್ನೆ

11:47 PM May 26, 2024 | Team Udayavani |

ಬೆಂಗಳೂರು:ಮುಖ್ಯಮಂತ್ರಿ ಈಗ ಪತ್ರ ಬರೆದಿದ್ದಾರೆ ಎಂದು ವಿದೇಶಾಂಗ ಸಚಿವರು ಹೇಳಿರುವುದು ಸರಿಯಲ್ಲ. ಮೇ 1ರಂದೇ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ಆ ಪತ್ರ ಎಲ್ಲಿ ಹೋಯಿತು ಎಂದು ಗೃಹ ಸಚಿವ ಡಾ| ಜಿ. ಪರಮೇಶ್ವರ ಪ್ರಶ್ನಿಸಿದ್ದಾರೆ.

Advertisement

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್‌ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದುಗೊಳಿಸುವ ಕುರಿತ ಪತ್ರಕ್ಕೆ ಕೇಂದ್ರದಿಂದ ಯಾವ ಪ್ರತಿಕ್ರಿಯೆಯೂ ಬಂದಿಲ್ಲ. ವಿದೇಶಾಂಗ ಸಚಿವರು, ಇನ್ನೆರಡು ದಿನಗಳಲ್ಲಿ ರದ್ದು ಮಾಡುವುದಾಗಿ, ಈ ಬಗ್ಗೆ ಕ್ರಮ ತೆಗೆದುಕೊಳ್ಳುತ್ತಿರುವುದಾಗಿ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿರುವುದನ್ನು ಗಮನಿಸಿದ್ದೇನೆ ಅಷ್ಟೇ. ಅಷ್ಟಕ್ಕೂ ಮೇ 1ರಂದೇ ಬರೆದ ಪತ್ರ ಎಲ್ಲಿ ಹೋಯಿತು? ಮುಖ್ಯಮಂತ್ರಿ ಪತ್ರ ಪ್ರಧಾನಿ ಕಚೇರಿಗೆ ಹೋಗುತ್ತದೆ ಎಂದಾದರೆ ಅದಕ್ಕೆ ಗೌರವ ಸಿಗಬೇಕಲ್ಲವೇ ಎಂದು ಪ್ರಶ್ನಿಸಿದರು.

ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಹಿತಿಗಳ ಅಸಮಾಧಾನದ ಕುರಿತು ಪ್ರಶ್ನಿಸಿದಾಗ, ಸಂತ್ರಸ್ತೆಯರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ರಕ್ಷಣೆ ನೀಡುವುದಾಗಿ ನಾನು ಮತ್ತು ಸಿಎಂ ಹೇಳಿದ್ದೇವೆ.

ಸಂತ್ರಸ್ತೆಯರನ್ನು ಯಾರು ಕೂಡ ಒತ್ತಾಯ ಮಾಡಿ, ಬೇರೆ ರೀತಿಯಲ್ಲಿ ಬಳಸಿಕೊಳ್ಳಲು ಬಿಡುವುದಿಲ್ಲ. ಸಂತ್ರಸ್ತೆಯರಿಗೆ ತೊಂದರೆಯಾಗದಂತೆ ನೋಡಿಕೊಳ್ಳುವಂತೆ ಹಾಸನ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ, ವಲಯ ಐಜಿಪಿಯವರಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ನೈಜ ಆರೋಪಿ ಹೊರತರಲೆಂದೇ ಎಸ್‌ಐಟಿ ರಚನೆ
ಪೆನ್ ಡ್ರೈವ್ ಪ್ರಕರಣದಲ್ಲಿ ನಿಜವಾದ ಆರೋಪಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿರುವ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಾವೂ ಅದೇ ಕೆಲಸ ಮಾಡುತ್ತಿದ್ದೇವೆ. ನಿಜವಾದ ಆರೋಪಿ ಯಾರು? ಪ್ರಕರಣದಲ್ಲಿ ಪ್ರಜ್ವಲ್‌ ಪಾತ್ರ ಏನು? ಎಂಬುದಕ್ಕಾಗಿಯೇ ತನಿಖೆ ನಡೆಸಬೇಕು ಅಂತಾನೇ ಎಸ್‌ಐಟಿ ರಚಿಸಲಾಗಿದೆ. ಗಾಳಿಯಲ್ಲಿ ಗುಂಡು ಹೊಡೆದಂತೆ, ಯಾರದ್ದೋ ಹೆಸರು ಹೇಳುವ ಅಗತ್ಯವಿಲ್ಲ. ತನಿಖೆ ಆಗುವ ಮುಂಚೆಯೇ ಹೇಳಿಕೆಗಳನ್ನು ನೀಡಿದರೆ ತನಿಖೆಗೆ ತೊಂದರೆಯಾಗುತ್ತದೆ ಎಂದು ತಿರುಗೇಟು ನೀಡಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next