ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣದ ವಿಚಾರಣೆಗೆ ಹಾಜರಾಗಲು ಏಳು ದಿನಗಳ ಕಾಲಾವಕಾಶ ನೀಡುವಂತೆ ಪ್ರಜ್ವಲ್ ರೇವಣ್ಣ ಪರ ವಕೀಲ ಅರುಣ್ ಜಿ. ಅವರು ಎಸ್ ಐಟಿ ಅಧಿಕಾರಿಗಳಿಗೆ ಪತ್ರವೊಂದನ್ನು ಬರೆದಿದ್ದಾರೆ.
ಅಲ್ಲದೆ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ಪ್ರಜ್ವಲ್ ರೇವಣ್ಣ ಅವರು ಮೊದಲ ಬಾರಿಗೆ ಸಾಮಾಜಿಕ ಜಾಲತಾಣ ‘X’ ಮೂಲಕ ತಮ್ಮ ಮೊದಲ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಇದರಲ್ಲಿ ‘ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನಾನು ನನ್ನ ವಕೀಲರ ಮೂಲಕ C.I.D ಬೆಂಗಳೂರಿಗೆ ಮನವಿ ಮಾಡಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ. ಎಂದು ಬರೆದುಕೊಂಡಿದ್ದಾರೆ.
ಈ ನಡುವೆ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ಹಾಜರಾಗುವಂತೆ ನೀಡಿರುವ ನೊಟೀಸ್ ಗೆ ವಕೀಲರಾದ ಅರುಣ್ ಉತ್ತರ ನೀಡಿದ್ದು ನನ್ನ ಕಕ್ಷಿದಾರ ಪ್ರಜ್ವಲ್ ರೇವಣ್ಣ ಸದ್ಯ ವಿದೇಶ ಪ್ರವಾಸದಲ್ಲಿರುವ ಕಾರಣ ವಿಚಾರಣೆಗೆ ಏಳು ದಿನಗಳ ಸಮಯಾವಕಾಶ ನೀಡಿ ಬದಲಿ ದಿನಾಂಕವನ್ನು ನೀಡುವಂತೆ ಕೋರಿಕೊಂಡಿದ್ದಾರೆ.