Advertisement

Revanna; ಪ್ರಜ್ವಲ್ ಗೆ 14 ದಿನ ನ್ಯಾಯಾಂಗ ಬಂಧನ: ಸೂರಜ್ ಜುಲೈ 1ರವರೆಗೆ ಸಿಐಡಿ ವಶಕ್ಕೆ

07:43 PM Jun 24, 2024 | Team Udayavani |

ಬೆಂಗಳೂರು: ಹಲವು ಮಹಿಳೆಯರ ಮೇಲಿನ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ನ್ಯಾಯಾಲಯ ಸೋಮವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Advertisement

ಪ್ರಕರಣಗಳ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ಅಡಿಯಲ್ಲಿ ಅವರ ಕಸ್ಟಡಿ ಸೋಮವಾರ ಕೊನೆಗೊಂಡಿದ್ದರಿಂದ, ಅವರನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು. ಜುಲೈ 8 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶರ ಮುಂದೆ ಪ್ರಜ್ವಲ್ ಜಾಮೀನು ಅರ್ಜಿ ವಿಚಾರಣೆಗೆ ಬಂದಿದ್ದು, ನ್ಯಾಯಾಲಯವು ಜೂನ್ 26 ಕ್ಕೆ ಆದೇಶವನ್ನು ಕಾಯ್ದಿರಿಸಿದೆ.

ಸೂರಜ್ ಜುಲೈ 1ರವರೆಗೆ ಸಿಐಡಿ ವಶಕ್ಕೆ

ವ್ಯಕ್ತಿಯೊಬ್ಬನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಂಧಿತರಾಗಿರುವ ಪ್ರಜ್ವಲ್ ಸಹೋದರ ಜೆಡಿಎಸ್ ಎಂಎಲ್ ಸಿ ಸೂರಜ್ ರೇವಣ್ಣ ಅವರನ್ನು ಜುಲೈ 1ರವರೆಗೆ ಅಪರಾಧ ತನಿಖಾ ಇಲಾಖೆ (CID) ವಶಕ್ಕೆ ಒಪ್ಪಿಸಿ ನ್ಯಾಯಾಲಯ ಸೋಮವಾರ ಆದೇಶ ಹೊರಡಿಸಿದೆ.

Advertisement

ಸೂರಜ್ ರೇವಣ್ಣ ಅವರನ್ನು ಭಾನುವಾರ ಹಾಸನದಲ್ಲಿ ಪೊಲೀಸರು ಬಂಧಿಸಿದ್ದರು. ರಾಜ್ಯ ಸರಕಾರ ಪ್ರಕರಣವನ್ನು ಸಿಐಡಿಗೆ ವಹಿಸಿತ್ತು. ಹಾಸನದಿಂದ ಬೆಂಗಳೂರಿಗೆ ಸ್ಥಳಾಂತರಿಸಿದ ನಂತರ, ಸಿಐಡಿ ಭಾನುವಾರ ರಾತ್ರಿ 42 ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ (ACMM) ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

27 ವರ್ಷದ ಜೆಡಿ ಎಸ್ ಕಾರ್ಯಕರ್ತ ನೀಡಿದ ದೂರಿನ ಮೇರೆಗೆ ಪೊಲೀಸರು ಸೂರಜ್ ವಿರುದ್ಧ ಐಪಿಸಿ ಸೆಕ್ಷನ್ 377 (ಅಸ್ವಾಭಾವಿಕ ಅಪರಾಧಗಳು), 342 (ಅಕ್ರಮ ಬಂಧನ), 506 (ಕ್ರಿಮಿನಲ್ ಬೆದರಿಕೆ) ಮತ್ತು 34 (ಸಾಮಾನ್ಯ ಉದ್ದೇಶಕ್ಕಾಗಿ ಹಲವಾರು ವ್ಯಕ್ತಿಗಳು ಮಾಡಿದ ಕೃತ್ಯಗಳು) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಜೂನ್ 16 ರಂದು ಗನ್ನಿಕಡದಲ್ಲಿರುವ ತನ್ನ ತೋಟದ ಮನೆಯಲ್ಲಿ ಎಂಎಲ್‌ಸಿ ತನ್ನ ಮೇಲೆ ಸಲಿಂಗ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಯುವಕ ಆರೋಪಿಸಿದ್ದಾನೆ.

Advertisement

Udayavani is now on Telegram. Click here to join our channel and stay updated with the latest news.

Next