Advertisement

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

11:03 PM Apr 28, 2024 | Team Udayavani |

ಬೆಂಗಳೂರು: ಪ್ರಜ್ವಲ್‌ ತಪ್ಪು ಮಾಡಿದ್ದರೆ ಶಿಕ್ಷೆಯಾಗಲೇ ಬೇಕು. ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

Advertisement

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೈಂಗಿಕ ದೌರ್ಜನ್ಯದ ಆರೋಪದಲ್ಲಿ ಸರಕಾರ ಎಸ್‌ಐಟಿ ತನಿಖೆಗೆ ಆದೇಶಿಸಿದೆ. ತನಿಖೆ ಪೂರ್ಣಗೊಂಡು ಸತ್ಯಾಂಶ ಹೊರಬರಲಿ. ನಾವು ತಪ್ಪು ಮಾಡಿದವರನ್ನು ಯಾವ ಕಾರಣಕ್ಕೂ ಕ್ಷಮಿಸುವುದಿಲ್ಲ ಎಂದು ಹೇಳಿದರು. ಕಷ್ಟ ಎಂದು ಹೇಳಿಕೊಂಡು ಬಂದ ಹೆಣ್ಮಕ್ಕಳನ್ನು ನಾನಾಗಲಿ, ಎಚ್‌.ಡಿ. ದೇವೇಗೌಡರಾಗಲಿ ಅತ್ಯಂತ ಗೌರವದಿಂದ ನಡೆಸಿಕೊಂಡಿದ್ದೇವೆ ಎಂದು ಹೇಳಿದ್ದಾರೆ.

ಪ್ರಜ್ವಲ್‌ ವಿದೇಶಕ್ಕೆ ಹೋಗಿದ್ದಾರೆ ಎಂಬ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ, ಎಸ್‌ಐಟಿ ತನಿಖೆ ನಡೆಸುತ್ತಿದೆ. ಎಲ್ಲೇ ಇದ್ದರೂ ಕರೆದುಕೊಂಡು ಬರುವ ಜವಾಬ್ದಾರಿ ಅವರದು ಎಂದರು.

ಸೋಲಿಸುವ ತಂತ್ರವೂ ಇರಬಹುದು: ಜಿಟಿಡಿ
ಪ್ರಜ್ವಲ್‌ ಅವರದು ಎನ್ನಲಾದ ಲೈಂಗಿಕ ದೌರ್ಜನ್ಯದ ಆರೋಪದ ಬಗ್ಗೆ ರಾಜ್ಯ ಸರಕಾರ ವಿಶೇಷ ತನಿಖಾ ದಳಕ್ಕೆ ವಹಿಸಿರುವುದನ್ನು ಸ್ವಾಗತಿಸುತ್ತೇನೆ. ಆದರೆ ಈ ಆರೋಪದ ಹಿಂದೆ ಅವರನ್ನು ಸೋಲಿಸುವ ಹುನ್ನಾರವೂ ಇರಬಹುದು ಎಂದು ಜೆಡಿಎಸ್‌ ಕೋರ್‌ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ತಿಳಿಸಿದರು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next