Advertisement

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

06:13 PM May 02, 2024 | Team Udayavani |

ಹೊಸದಿಲ್ಲಿ: ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ತನಿಖೆ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ಅವರು ರಾಜತಾಂತ್ರಿಕ ಪಾಸ್‌ಪೋರ್ಟ್ ಹೊಂದಿರುವ ಕಾರಣ ಜರ್ಮನಿ ಪ್ರವಾಸಕ್ಕೆ ರಾಜಕೀಯ ಅನುಮತಿ ಕೋರಿಲ್ಲ ಎಂದು ವಿದೇಶಾಂಗ ಸಚಿವಾಲಯ ಗುರುವಾರ ಹೇಳಿದೆ.

Advertisement

ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಎಂಇಎ ವಕ್ತಾರ ರಣಧೀರ್ ಜೈಸ್ವಾಲ್,’ ಜರ್ಮನಿಗೆ ತೆರಳು ಪ್ರಜ್ವಲ್ ಪ್ರಯಾಣಕ್ಕೆ ಸಂಬಂಧಿಸಿದಂತೆ ವಿದೇಶಾಂಗ ಇಲಾಖೆಯಿಂದ ಯಾವುದೇ ರಾಜಕೀಯ ಅನುಮತಿಯನ್ನು ಕೋರಲಾಗಿಲ್ಲ, ನಾವು ನೀಡಿಲ್ಲ’ ಎಂದು ಹೇಳಿದ್ದಾರೆ.

‘ನಿಸ್ಸಂಶಯವಾಗಿ, ಯಾವುದೇ ವೀಸಾವನ್ನು ಸಹ ನೀಡಲಾಗಿಲ್ಲ. ರಾಜತಾಂತ್ರಿಕ ಪಾಸ್‌ಪೋರ್ಟ್ ಹೊಂದಿರುವವರಿಗೆ ಜರ್ಮನಿಗೆ ಪ್ರಯಾಣಿಸಲು ಯಾವುದೇ ವೀಸಾ ಅಗತ್ಯವಿಲ್ಲ. ಸಚಿವಾಲಯವು ಹೇಳಿದ ಸಂಸದರಿಗೆ ಬೇರೆ ಯಾವುದೇ ದೇಶಕ್ಕೆ ಯಾವುದೇ ವೀಸಾ ಟಿಪ್ಪಣಿಯನ್ನು ನೀಡಿಲ್ಲ.ಅವರು ರಾಜತಾಂತ್ರಿಕ ಪಾಸ್‌ಪೋರ್ಟ್‌ನಲ್ಲಿ ಪ್ರಯಾಣಿಸಿದ್ದಾರೆ’ ಎಂದು ಸ್ಪಷ್ಟನೆ ನೀಡಿದ್ದಾರೆ.

ಲೈಂಗಿಕ ಕಿರುಕುಳದ ಆರೋಪ ಕೇಳಿ ಬಂದು ವಿಡಿಯೋಗಳು ವೈರಲ್ ಆಗುತ್ತಿದ್ದ ವೇಳೆಯಲ್ಲೇ ಪ್ರಜ್ವಲ್ ಏಪ್ರಿಲ್ 26 ರಂದು ಜರ್ಮನಿಯ ಫ್ರಾಂಕ್‌ಫರ್ಟ್‌ಗೆ ತೆರಳಿದ್ದರು.

ಲುಕ್‌ಔಟ್ ನೋಟಿಸ್ ಜಾರಿ
ಲೈಂಗಿಕ ಹಗರಣದ ತನಿಖೆಗೆ ಕರ್ನಾಟಕ ಸರ್ಕಾರ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದ್ದು, ಗುರುವಾರ, ಎಸ್‌ಐಟಿ ವಿಶ್ವದಾದ್ಯಂತ ಎಲ್ಲಾ ವಲಸೆ ಕೇಂದ್ರಗಳಲ್ಲಿ ಪ್ರಜ್ವಲ್ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಿದೆ.

Advertisement

ಇಂದು ಎಸ್‌ಐಟಿ ಮುಂದೆ ಹಾಜರಾಗಬೇಕಿದ್ದ ರೇವಣ್ಣ ಅವರು ಬೆಂಗಳೂರಿನ ಸೆಷನ್ಸ್ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next