Advertisement

HC direction ಬಳಿಕ ಎಸ್‌ಐಟಿ ಎದುರು ಹಾಜರಾದ ಭವಾನಿ ರೇವಣ್ಣ: ಸುದೀರ್ಘ ವಿಚಾರಣೆ

06:01 PM Jun 07, 2024 | Team Udayavani |

ಬೆಂಗಳೂರು: ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ತಾಯಿ ಭವಾನಿ ರೇವಣ್ಣ ಅವರು ಎಸ್‌ಐಟಿ ಮುಂದೆ ಹಾಜರಾಗಿದ್ದಾರೆ. ತನಿಖಾ ತಂಡ ಸುದೀರ್ಘ ವಿಚಾರಣೆ ನಡೆಸಿದೆ.

Advertisement

ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ ಬಳಿಕ ಕರ್ನಾಟಕ ಹೈಕೋರ್ಟ್‌ನ ನಿರ್ದೇಶನದ ಬಳಿಕ ವಿಚಾರಣೆಗೆ ಹಾಜರಾಗಿದ್ದಾರೆ.

ಭವಾನಿ ಅವರು ಮಹಿಳೆಯೊಬ್ಬರನ್ನು ಅಪಹರಿಸಿದ ಆರೋಪ ಎದುರಿಸುತ್ತಿದ್ದು, ಹಲವಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಪುತ್ರ ಪ್ರಜ್ವಲ್ ಗೆ ಸಹಕಾರ ನೀಡಿರುವ ಆರೋಪವೂ ಇದೆ.

ಶುಕ್ರವಾರ ಮಧ್ಯಾಹ್ನ 1 ಗಂಟೆಯೊಳಗೆ ಎಸ್‌ಐಟಿಯ ತನಿಖಾಧಿಕಾರಿ ಮುಂದೆ ಹಾಜರಾಗಿ ತನಿಖೆಗೆ ಸಂಪೂರ್ಣ ಸಹಕಾರ ನೀಡಿದ ಹಿನ್ನೆಲೆಯಲ್ಲಿ ಭವಾನಿ ರೇವಣ್ಣ ಅವರಿಗೆ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರು ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದಾರೆ.

ಪ್ರಜ್ವಲ್ ನಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯ ಅಪಹರಣ ಪ್ರಕರಣ ನಡೆದ ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕು ಮತ್ತು ಇಡೀ ಹಾಸನ ಜಿಲ್ಲೆಯ ವ್ಯಾಪ್ತಿಯೊಳಗೆ ಪ್ರವೇಶಿಸದಂತೆ ಹೈಕೋರ್ಟ್ ನಿರ್ಬಂಧಿಸಿದೆ.

Advertisement

ಏತನ್ಮಧ್ಯೆ, ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಭವಾನಿ ಅವರ ಕಾರು ಚಾಲಕನನ್ನು ವಶಕ್ಕೆ ಪಡೆದಿದೆ ಎಂದು ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next