Advertisement
ಸುದ್ದಿಗಾರರ ಜತೆ ಮಾತನಾಡಿದ ಅವರು, ಸರಕಾರ ಎಸ್‌ಐಟಿ ರಚನೆ ಮಾಡಿದೆ. ಕಾನೂನು ಪ್ರಕಾರ ಏನು ಕ್ರಮ ಆಗಬೇಕೋ ಅದು ಆಗುತ್ತದೆ. ಈ ವಿಚಾರದಲ್ಲಿ ಬಿಜೆಪಿ ನಿಲುವು ಸ್ಪಷ್ಟವಾಗಿದೆ. ಕಾಂಗ್ರೆಸ್‌ನವರು ಗ್ಯಾರಂಟಿ ಮರೆತು ಪೆನ್‌ಡ್ರೈವ್ ಬಗ್ಗೆ ಮಾತನಾಡುತ್ತಿದ್ದಾರೆ. ಇದರಿಂದ ಚುನಾವಣೆ ಮೇಲೆ ಪರಿಣಾಮ ಆಗದು. ನಾವು ಮಹಿಳೆಯರ ಪರವಾಗಿಯೇ ಇದ್ದು, ಯಾವುದೇ ಕಾರಣಕ್ಕೂ ಪ್ರಜ್ವಲ್ ಪರ ನಿಲ್ಲುವುದಿಲ್ಲ ಎಂದರು.
ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಮತ್ತು ಕಾರ್ಯಕರ್ತರು ಶ್ರಮ ಹಾಕಿದ್ದು, ಅದಕ್ಕೆ ಸರಿಯಾದ ಪ್ರತಿಫಲ ಸಿಗುತ್ತದೆ. 28ಕ್ಕೆ 28 ಕ್ಷೇತ್ರಗಳನ್ನೂ ಗೆಲ್ಲುವ ನಮ್ಮ ಸಂಕಲ್ಪ ಈಡೇರುತ್ತದೆ ಎಂದು ವಿಜಯೇಂದ್ರ ತಿಳಿಸಿದರು. ಶಿರಾಳಕೊಪ್ಪದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಗ್ಯಾರಂಟಿ ಅಲೆಯಲ್ಲಿ ಗೆಲ್ಲುತ್ತೇವೆ ಎಂಬ ಭ್ರಮೆಯಲ್ಲಿದ್ದಾರೆ. ರಾಜ್ಯದ ಜನರು ದಡ್ಡರಲ್ಲ. ಅವರು ಮೋದಿಯವರ ಅಭಿವೃದ್ಧಿ ಕಾರ್ಯವನ್ನು ನೋಡಿದ್ದಾರೆ. ಹೀಗಾಗಿ ಜನರು ಮೋದಿ ಪರವಾಗಿ ನಿಲ್ಲುತ್ತಾರೆ. ರಾಘವೇಂದ್ರ ಅಭಿವೃದ್ಧಿ ಮಾಡಿಲ್ಲ ಎಂದು ಅಯೋಗ್ಯರು ಹಾಗೂ ಅಭಿವೃದ್ಧಿ ಎಂದರೆ ಏನೆಂದು ಗೊತ್ತಿಲ್ಲದವರು ಹೇಳಬೇಕಷ್ಟೇ. ರಾಘವೇಂದ್ರ 3 ಲಕ್ಷ ಮತಗಳ ಅಂತರದಲ್ಲಿ ಗೆಲ್ಲುತ್ತಾರೆ ಎಂದರು.