ಬೆಂಗಳೂರು: ಕಾಂಗ್ರೆಸ್ ನ ಸೋನಿಯಾ ಗಾಂಧಿ ಬೇಕಿದ್ದರೆ ಬಿಜೆಪಿಗೆ ಬರುತ್ತಾರೆ. ಆದರೆ ಪ್ರಕಾಶ್ ಹುಕ್ಕೇರಿ ಮಾತ್ರ ಬಿಜೆಪಿಗೆ ಬರುವುದಿಲ್ಲ ಎಂದು ಮಾಜಿ ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ ಹೇಳಿದರು.
ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಜಿಲ್ಲೆಯ ನೀರಾವರಿ ಕಾಮಗಾರಿಗಳ ಬಗ್ಗೆ ಚರ್ಚಿಸಲು ರಮೇಶ್ ಜಾರಕಿಹೊಳಿ ಭೇಟಿ ಮಾಡಿದ್ದೆ. ಯಾವ ರಾಜಕೀಯ ವಿಷಯಗಳ ಬಗ್ಗೆಯೂ ಅವರ ಜೊತೆ ಚರ್ಚೆ ಮಾಡಿಲ್ಲ ಎಂದ ಅವರು ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿ, ನಾನೇನು ರಾಜಕೀಯದಿಂದ ನಿವೃತ್ತಿಯಾಗಿಲ್ಲ. ಪಕ್ಷದವರು ನನಗೆ ಜವಾಬ್ದಾರಿ ಕೊಟ್ಟರೆ ನಾನು ಮಾಡ್ತೇನೆ ಎಂದು ಪರೋಕ್ಷವಾಗಿ ಟಿಕೆಟ್ ಬೇಡಿಕೆಯಿಟ್ಟರು.
ಇದನ್ನೂ ಓದಿ:ಬೀಗರ ಊಟಕ್ಕೆ ಆಗಮಿಸಿ ಈಜಲು ತೆರಳಿದ ಯುವಕರು; ನಾಲ್ವರು ನಾಪತ್ತೆ, ಓರ್ವನ ಮೃತದೇಹ ಪತ್ತೆ
ರಮೇಶ್ ಜಾರಕಿಹೊಳಿಯವರ ಪುತ್ರ ಬೆಳಗಾವಿಯಿಂದ ಲೋಕಸಭೆಗೆ ಸ್ಪರ್ಧೆ ಮಾಡುವ ವಿಚಾರವಾಗಿ ಕೇಳಿದ ಪ್ರಶ್ನೆಗೆ ನನಗೆ ಗೊತ್ತಿಲ್ಲ ಎಂದು ಉತ್ತರಿಸಿದರು.