ನವದೆಹಲಿ: ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ತಮ್ಮ ಪ್ರತಿಭಟನೆಯನ್ನು ಆರಂಭಿಸಿದಾಗಿನಿಂದಲೂ ರೈತರ ಹಕ್ಕುಗಳ ಪರವಾಗಿ ಧ್ವನಿಯೆತ್ತಿರುವ ನಟ ಪ್ರಕಾಶ್ ರಾಜ್, ಪ್ರತಿಭಟನೆಯ ಸಮಯದಲ್ಲಿ ರೈತರ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಹೊಣೆ ಹೊರಬೇಕು ಎಂದು ಭಾನುವಾರ ಹೇಳಿದ್ದಾರೆ.
ತೆಲಂಗಾಣ ಪೌರಾಡಳಿತ ಮತ್ತು ನಗರಾಭಿವೃದ್ಧಿ ಸಚಿವ ಕೆ.ಟಿ. ರಾಮರಾವ್ ಮತ್ತು ಪ್ರಕಾಶ್ ರಾಜ್ ಅವರು ತಮ್ಮ ಟ್ವೀಟ್‌ನಲ್ಲಿ, “ಪ್ರಿಯ ಪ್ರಧಾನಿಯವರೇ, ಕ್ಷಮಿಸಿ ಯಾಚಿಸಿದರೆ ಸಾಲದು.. ನೀವು ಜವಾಬ್ದಾರಿಯನ್ನು ಪರಿಹಾರ ಕ್ರಮಗಳನ್ನು ನಿಭಾಯಿಸುತ್ತೀರಾ ಎಂದು ಪ್ರಶ್ನಿಸಿದ್ದಾರೆ.
ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರ ಬಗ್ಗೆ ನನಗೆ ಹೆಮ್ಮೆ ಇದೆ ಎಂದು ಟ್ವೀಟ್‌ನಲ್ಲಿ ರಾಮರಾವ್ ಹೇಳಿದ್ದಾರೆ, ಅವರು ಕೃಷಿ ಕಾನೂನುಗಳ ವಿರುದ್ಧ ಹೋರಾಡಿ ಪ್ರಾಣ ಕಳೆದುಕೊಂಡ 750ಕ್ಕೂ ಹೆಚ್ಚು ರೈತರಿಗೆ ತಲಾ 3 ಲಕ್ಷ ರೂ ಹೆಚ್ಚಿಗೆ ಪರಿಹಾರ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
Related Articles
ಕೇಂದ್ರ ಸರ್ಕಾರವು ಪ್ರತಿಯೊಬ್ಬ ರೈತರ ಕುಟುಂಬಗಳಿಗೆ 25 ಲಕ್ಷ ರೂಪಾಯಿಗಳ ಪರಿಹಾರವನ್ನು ಘೋಷಿಸಬೇಕು ಮತ್ತು ಅವರ ಮೇಲಿನ ಎಲ್ಲಾ ಪ್ರಕರಣಗಳನ್ನು ಬೇಷರತ್ತಾಗಿ ಹಿಂಪಡೆಯಬೇಕು ಎಂದು ತೆಲಂಗಾಣ ಮುಖ್ಯಮಂತ್ರಿ ಒತ್ತಾಯಿಸಿದ್ದಾರೆ ಎಂದು ಸಚಿವರು ಹೇಳಿದ್ದಾರೆ.