Advertisement

Union Ministers; ಅಧಿಕಾರ ಸ್ವೀಕರಿಸಿದ ರಾಜ್ಯದ ನಾಲ್ವರು ಸಚಿವರು

09:47 PM Jun 11, 2024 | Team Udayavani |

ನವದೆಹಲಿ: ಮೋದಿ 3.0 ಸರ್ಕಾರಕ್ಕೆ ಕರ್ನಾಟಕದಿಂದ ಆಯ್ಕೆಯಾಗಿರುವ ನಾಲ್ವರು ಸಚಿವರು ಮಂಗಳವಾರ ಅಧಿಕಾರ ಸ್ವೀಕರಿಸಿದ್ದಾರೆ. ಉಕ್ಕು ಮತ್ತು ಬೃಹತ್‌ ಕೈಗಾರಿಕೆ ಸಚಿವರಾಗಿ ಎಚ್‌.ಡಿ.ಕುಮಾರಸ್ವಾಮಿ, ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾಗಿ ಪ್ರಹ್ಲಾದ್‌ ಜೋಶಿ, ರೈಲ್ವೆ ಖಾತೆ ರಾಜ್ಯ ಸಚಿವರಾಗಿ ವಿ.ಸೋಮಣ್ಣ, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ ರಾಜ್ಯ ಸಚಿವೆಯಾಗಿ ಶೋಭಾ ಕರಂದ್ಲಾಜೆ  ಅವರು ಅಧಿಕಾರ ಸ್ವೀಕರಿಸಿದ್ದಾರೆ.

Advertisement

80 ಕೋಟಿ ಜನರಿಗೆ ಆಹಾರ ಧಾನ್ಯ: ಈ ವೇಳೆ ಮಾತನಾಡಿದ ಸಚಿವ ಪ್ರಹ್ಲಾದ ಜೋಶಿ, 80 ಕೋಟಿ ಜನರಿಗೆ ಆಹಾರ ಧಾನ್ಯ ಒದಗಿಸುವತ್ತ ಕೆಲಸ ಮಾಡುವುದಾಗಿ ಹೇಳಿದರು. ಚುನಾವಣೆಗೂ ಮುನ್ನ ಬಿಜೆಪಿಯ ಜೊತೆ ಮೈತ್ರಿ ಮಾಡಿಕೊಂಡ ಜೆಡಿಎಸ್‌ ಕೋಟಾದಡಿಯಲ್ಲಿ ಸಚಿವ ಸ್ಥಾನ ಪಡೆದುಕೊಂಡ ಮಾಜಿ ಸಿಎಂ ಕುಮಾರಸ್ವಾಮಿ ಅವರೂ ಅಧಿಕಾರ ಸ್ವೀಕರಿಸಿದರು. 25 ವರ್ಷಗಳ ಬಳಿಕ ಜೆಡಿಎಸ್‌ಗೆ ಕೇಂದ್ರದಲ್ಲಿ ಮಂತ್ರಿಗಿರಿ ಸಿಕ್ಕಿದ್ದು, ಉಕ್ಕು ಮತ್ತು ಬೃಹತ್‌ ಕೈಗಾರಿಕೆ ಸಚಿವರಾಗಿ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.

ರೈಲ್ವೆ ಖಾತೆ ರಾಜ್ಯ ಸಚಿವರಾಗಿ ಅಧಿಕಾರ ಸ್ವೀಕರಿಸಿದ ವಿ.ಸೋಮಣ್ಣ ಅವರು, ಮೋದಿ ಅವರ ಅಧಿಕಾರವಧಿಯಲ್ಲಿ ದೇಶದಲ್ಲಿ ಸಾಕಷ್ಟು ಅಭಿವೃದ್ಧಿಯಾಗಿದೆ. ಅಶ್ವಿ‌ನಿ ವೈಷ್ಣವ್‌ ಅವರ ಮಾರ್ಗದರ್ಶನದಲ್ಲಿ ರೈಲ್ವೆ ಅಭಿವೃದ್ಧಿ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ರಾಜ್ಯ ಸಚಿವೆಯಾಗಿ ಶೋಭ ಕರಂದ್ಲಾಜೆ ಅವರು ಅಧಿಕಾರ ಸ್ವೀಕರಿಸಿದರು. ಇದಲ್ಲದೇ ಅವರಿಗೆ ಕಾರ್ಮಿಕ ಮತ್ತು ಉದ್ಯೋಗ ಖಾತೆಯ ಜವಾಬ್ದಾರಿ ಸಹ ವಹಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next