Advertisement
1998-2003ರವರೆಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸಿದ್ದರು. ಬಿಜೆಪಿ ಸಂಕಷ್ಟ ಸ್ಥಿತಿಯಲ್ಲಿದ್ದಾಗ 2013-ಖ 2017ರವರೆಗೆ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಯನ್ನು ಸಮರ್ಪಕವಾಗಿ ನಿಭಾ ಯಿಸಿದ್ದರು. ಬಿ.ಎಸ್.ಯಡಿಯೂರಪ್ಪ ಪಕ್ಷ ಬಿಟ್ಟು ಕೆಜೆಪಿ ಕಟ್ಟಿದ ಸಂದರ್ಭದಲ್ಲಿ ರಾಜ್ಯದಲ್ಲಿ ಪಕ್ಷ ಮುನ್ನಡೆಸಿದ್ದಲ್ಲದೆ, 2018ರಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮುವಂತೆ ಮಾಡುವಲ್ಲಿ ವಿಶಿಷ್ಟ ಕೊಡುಗೆ ನೀಡಿದ್ದರು.
2004-2024ರವರೆಗೆ ಸತತ ಐದು ಬಾರಿ ಧಾರವಾಡ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದಾರೆ. 2019ರಲ್ಲಿ ಸಂಪುಟ ದರ್ಜೆ ಸಚಿವರಾಗಿದ್ದರು. ಇದೀಗ 2ನೇ ಬಾರಿಗೆ ಸಚಿವರಾಗಿ ಮೋದಿಗೆ ಜತೆಯಾಗಿದ್ದಾರೆ. ನೀಡಿದ ಖಾತೆಗೆ ನ್ಯಾಯ ಒದಗಿಸಿದ ನಾಯಕ
ಪ್ರಹ್ಲಾದ ಜೋಶಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ರಾಗಿ ಕಾರ್ಯನಿರ್ವಹಿಸಿದ್ದು, ಕೊಟ್ಟ ಖಾತೆಗಳಿಗೆ ನ್ಯಾಯ ಒದಗಿಸಿದ್ದಾರೆ. 2022-23ರಲ್ಲಿ ಸುಮಾರು 893 ಮಿಲಿಯನ್ ಟನ್‌ನಷ್ಟು ಕಲ್ಲಿದ್ದಲು ಉತ್ಪಾದನೆ ಯೊಂದಿಗೆ ಭಾರತ ಕಲ್ಲಿದ್ದಲು ವಿಚಾರದಲ್ಲಿ ಸ್ವಾವಲಂಬನೆಯತ್ತ ಹೆಜ್ಜೆ ಹಾಕುವಂತೆ ಮಾಡಿದ್ದರು. ಇದು ದೇಶದ ಇತಿಹಾಸದಲ್ಲಿಯೇ ದಾಖಲೆ ಉತ್ಪಾದನೆಯಾಗಿತ್ತು.
Related Articles
Advertisement