ವಿಜಯಪುರ: ರಾಮ ಕಲ್ಪಿತ ಎನ್ನುತ್ತಿದ್ದ ಕಾಂಗ್ರೆಸ್, ರಾಮ ನಿರ್ಮಾಣ ಅಸಾಧ್ಯವೆಂದು ಅರಿತಿತ್ತು. ಇದೀಗ ಗೊಂದಲಕ್ಕೆ ಸಿಲುಕಿದ್ದು, 35 ವರ್ಷಗಳ ಹಿಂದಿನ ಪ್ರಕರಣ ಕೆದಕಿ, ಬಂಧಿಸುವ ನೀಚ ಕೆಲಸಕ್ಕೆ ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಿಡಿ ಕಾರಿದ್ದಾರೆ.
ಬುಧವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಮ ಮಂದಿರ ನಿರ್ಮಾಣ ಅಸಾಧ್ಯ ಎನ್ನುತ್ತಿದ್ದ ಕಾಂಗ್ರೆಸ್, ಇದೀಗ ಸಾಧ್ಯವಾಗುತ್ತಿದೆ. ಇದರಿಂದಾಗಿ ರಾಮ ಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಹೋಗುವ ಕುರಿತು ಕಾಂಗ್ರೆಸ್ ನಾಯಕರು ಗೊಂದಲದಲ್ಲಿದ್ದಾರೆ. ಪರಿಣಾಮ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶಗಳನ್ನು ಹಾಕುವ, ನಾನು ಹೋಗುವುದಿಲ್ಲ ಎಂದು ಹೇಳಿಕೆ ನೀಡುತ್ತಿದ್ದಾರೆ. ಪ್ರಧಾನಿ ಮೋದಿ ಅವರು ಯಾಕೆ ಹೋಗುತ್ತಾರೆ ಎಂದು ಪ್ರಶ್ನಿಸುವವರ ಮಾತು ಕೇಳದೆ ಜನರು ಸ್ವೀಕಾರ ಮಾಡುವುದಿಲ್ಲ. ರಾಮ ಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಹೋಗುತ್ತಿದ್ದಾರೆ ಎಂದರು.
ಪೊಲೀಸ್ ಅಧಿಕಾರಿಯೇ ಹತ್ಯೆಯಾಗುತ್ತಿದ್ದರು, ವ್ಯವಸ್ಥಿತ ಸಂಚಿನಿಂದ ಡಿ.ಜೆ.ಹಳ್ಳಿ, ಕೆ.ಜೆ.ಹಳ್ಳಿ ಪ್ರಕರಣದ ಆರೋಪಿಗಳನ್ನು ಪ್ರಕರಣದಿಂದ ಬಿಡುವಂತೆ ಕಾಂಗ್ರೆಸ್ ಪಕ್ಷದವರು ಪತ್ರ ಬರೆಯುತ್ತಿದ್ದಾರೆ. ರಾಜ್ಯದಲ್ಲಿ ಸಿದ್ದರಾಮಯ್ಯ ಮೊಘಲ್ ಸರ್ಕಾರ ನಡೆಸಲು ಬಯಸಿದ್ದಾರೆ. ಇಸ್ಲಾಮಿಕ್ ಐ.ಎಸ್.ಎಸ್. ಸಂಸ್ಥೆ ರೀತಿ ಸರ್ಕಾರ ನಡೆಸುತ್ತಿದ್ದಾರೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರನ್ನು ಖುಷಿ ಪಡಿಸುವ ಹಾಗೂ ಪುಷ್ಟೀಕರಣ ತಂತ್ರದ ಆಡಳಿತ ನಡೆಯುತ್ತಿದೆ ಎಂದು ಕಿಡಿಕಾರಿದರು.
ಸಿದ್ಧೇಶ್ವರ ಶ್ರೀಗಳ ಗುರು ನಮನಕ್ಕೆ ಮೋದಿ ಸಂದೇಶ: ನಗರದ ಜ್ಞಾನಯೋಗಾಶ್ರಮದಲ್ಲಿ ನಡೆಯುತ್ತಿರುವ ಸಿದ್ಧೇಶ್ವರ ಶ್ರೀಗಳ ಪ್ರಥಮ ವರ್ಷದ ಗುರು ನಮನ ಕಾರ್ಯಕ್ರಮಕ್ಕೆ ಬರಲಾಗದ ಪ್ರಧಾನಿ ನರೇಂದ್ರ ಮೋದಿ ಅವರು ಸಂದೇಶ ಕಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸಂದೇಶವನ್ನು ವಾಚಿಸಿದರು.